Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ದೇವ ದೇವ ಮಹಾಪ್ರಸಾದ. ತನ್ನ ರೂಪವ ತಿಳಿದು ನೋಡಬೇಕೆಂದು ಕನ್ನಡಿಯನುಪಾಸ್ತಿ ಮಾಡಲು ಆ ಕನ್ನಡಿ ಬೇಕು ಬೇಡೆಂಬುದೆ ಅಯ್ಯಾ ? ಪತಿಯಾಜ್ಞೆಯಂತೆ ಸತಿಪತಿಭಾವವ ಧರಿಸಿದಡೆ ಸಂಯೋಗಕಾಲದಲ್ಲಿ ಅಲ್ಲವೆಂದೆನಬಹುದೆ ? ನೀವೆ ಮಾಡಿದಡೆ ನೀವೆ ಮಾಡಿದುದು ನಾನೆ ಮಹಾಪ್ರಸಾದವೆಂದು ಸ್ವೀಕರಿಸಿದಡೂ ನೀವೆ ಮಾಡಿದುದು. ಅಂಗೈಯ ಲಿಂಗದ ಲಕ್ಷಣವ ನೋಡಿ ಎಂದು ಕೈಯಲ್ಲಿ ಕೊಟ್ಟಡೆ
ಲಿಂಗದಲ್ಲಿ ಲಕ್ಷಣವನರಸಲಾಗದೆಂದು ಚೆನ್ನಸಂಗಮನಾಥನ `ಕೋ' ಎಂದು ಕೊಟ್ಟಡೆ ಮಹಾಪ್ರಸಾದವೆಂದು ಕೈಕೊಂಡೆನು ಗುರುವೆ. ಬೆದರಿ ಅಂಜಿದಡೆ ಮನವ ಸಂತೈಸಿ ಏಕಾರ್ಥದ ಭೇದದ ತೋರಿ ಬಿನ್ನಹವ ಮಾಡಿದೆನು. ಕೂಡಲಚೆನ್ನಸಂಗಮದೇವರ ಮಹಾಮನೆಯ ಗಣಂಗಳು ಮೆಚ್ಚಲು
ಸಂಗನಬಸವಣ್ಣನ ಕರುಣದ ಶಿಶುವೆಂಬುದ ಮೂರುಲೋಕವೆಲ್ಲವು ಅಂದು ಜಯ ಜಯ ಎನುತಿರ್ದುದು.