ದೇಹವ ಮರೆಗೊಂಡಿಪ್ಪ ಆತ್ಮನಂತೆ,


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ದೇಹವ ಮರೆಗೊಂಡಿಪ್ಪ ಆತ್ಮನಂತೆ
ಶಕ್ತಿಯ ಮರೆಗೊಂಡಿಪ್ಪ ಶಿವನಂತೆ
ಕ್ಷೀರವ ಮರೆಗೊಂಡಿಪ್ಪ ತುಪ್ಪದಂತೆ
ವಾಚ್ಯವ ಮರೆಗೊಂಡಿಪ್ಪ ಅನಿರ್ವಾಚ್ಯದಂತೆ
ಲೋಕಾರ್ಥದೊಳಡಗಿಪ್ಪ ಪರಮಾರ್ಥದಂತೆ
ಎನ್ನ ಆತ್ಮನೊಳಡಗಿಪ್ಪ ಪರಮಾರ್ಥ ತತ್ವವು
ಬೀಜದೊಳಡಗಿದ ವೃಕ್ಷದಂತೆ ಇದ್ದಿತಯ್ಯ. ನಾನರಿಯದ ಮುನ್ನ ಎನ್ನೊಳಡಗಿದ್ದಿತಯ್ಯ ಶರಣ ಲಿಂಗ ಸಂಬಂಧ
ಮಹಾಲಿಂಗಗುರು ಶಿವಸಿದ್ದೇಶ್ವರ ಪ್ರಭುವೇ.