ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ ಹರದ ಕುಳ್ಳಿರ್ದ ನಮ್ಮ ಮಹಾದೇವಸೆಟ್ಟಿ. ಒಮ್ಮನವಾದಡೆ ಒಡನೆ ನುಡಿವನು ಇಮ್ಮನವಾದಡೆ ನುಡಿಯನು. ಕಾಣಿಯ ಸೋಲ ಅರ್ಧಗಾಣಿಯ ಗೆಲ್ಲ ಜಾಣ ನೋಡವ್ವಾ ನಮ್ಮ ಕೂಡಲಸಂಗಮದೇವ. 115