ಧರೆಯೂ ಬ್ರಹ್ಮಾಂಡವೂ ಚಂದ್ರಸೂರ್ಯ ತಾರಾಮಂಡಲವೂ ಇಲ್ಲಿಂದತ್ತಲೆ ನೋಡಾ. ನರನಲ್ಲ ಸುರನಲ್ಲ ಭ್ರಾಂತನಲ್ಲ ಶರಣನು ಲಿಂಗಸನ್ನಹಿತ ಅಪಾರಮಹಿಮನು. ಸುರಾಸುರರೆಲ್ಲರು ನಿಮ್ಮ ವರದಲ್ಲಿ ಸಿಲುಕಿದರು ! ಸರಸದೊಳಗಲ್ಲ ಹೊರಗಲ್ಲ ಕೇಳು ಭಾವ ಗುಹೇಶ್ವರ.