ನಟ್ಟಿರ್ದ ಬೆಟ್ಟಕ್ಕೆ ತಾಗು ತಡೆಯುಂಟೆ ಮರುಳೆ ? ಆತುರದಲ್ಲಿ ಕಳವಳಿಸಿ ವ್ಯಾಕುಳದಲ್ಲಿ ಕಳವಳಿಸುತಿಪ್ಪುದೀ ಮನವು. ಆ ಮನವು ಬೆನ್ನುದೋರದ ಮೊದಲೆ ಘನವ ಬೆಂಬತ್ತಿ ಬಿಡದಿರಬಲ್ಲಡೆ ತನ್ನಲ್ಲಿ ತ(ಚಿ?)ನ್ಮೂರ್ತಿ ಗುಹೇಶ್ವರನಯ್ಯಾ.