ನಡೆ ಚೆನ್ನ ನುಡಿ ಚೆನ್ನ ಎಲ್ಲಿ ನೋಡಿದಡಲ್ಲಿ ಚೆನ್ನ ಪ್ರಮಥರೊಳಗೆ ಚೆನ್ನ ಪುರಾತರೊಳಗೆ ಚೆನ್ನ. ಸವಿದು ನೋಡಿ ಅಂಬಲಿ ರುಚಿಯಾಯಿತ್ತೆಂದು ಕೂಡಲಸಂಗಮದೇವಂಗೆ ಬೇಕೆಂದು ಕೈದೆಗೆದ ನಮ್ಮ ಚೆನ್ನ.