ನಾದಪ್ರಿಯ ಶಿವನೆಂಬರು ನಾದಪ್ರಿಯ ಶಿವನಲ್ಲಯ್ಯಾ. ವೇದಪ್ರಿಯ ಶಿವನೆಂಬರು ವೇದಪ್ರಿಯ ಶಿವನಲ್ಲಯ್ಯಾ. ನಾದವ ನುಡಿಸಿದ ರಾವಳಂಗೆ ಅರೆ ಆಯುಷ್ಯವಾುತ್ತು. ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು. ನಾದಪ್ರಿಯನೂ ಅಲ್ಲ ವೇದಪ್ರಿಯನೂ ಅಲ್ಲ ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ. 181