ನಾದಬಿಂದುಗಳಿಲ್ಲದಂದು ನಿರ್ಭಯನೆಂಬ ಗಣೇಶ್ವರನು,


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಾದಬಿಂದುಗಳಿಲ್ಲದಂದು ನಿರ್ಭಯನೆಂಬ ಗಣೇಶ್ವರನು
ಉತ್ಪತ್ತಿ ಸ್ಥಿತಿ ಲಯವಿಲ್ಲದಂದು ಅಕ್ಷಯನೆಂಬ ಗಣೇಶ್ವರನು
ಓದು ವೇದಂಗಳಿಲ್ಲದಂದು ಓಂಕಾರನೆಂಬ ಗಣೇಶ್ವರನು
ಯುಗಜುಗಂಗಳಿಲ್ಲದಂದು ಊಧ್ರ್ವಮುಖನೆಂಬ ಗಣೇಶ್ವರನು
ಗುಹೇಶ್ವರಲಿಂಗವಿಲ್ಲದಂದು ನಿರ್ಮಾಯನೆಂಬ ಗಣೇಶ್ವರನು.