ನಾನೊಂದ ನೆನೆದಡೆ ತಾನೊಂದ ನೆನೆವುದು ನಾನಿತ್ತಲೆಳೆದಡೆ ತಾನತ್ತಲೆಳೆವುದು. ತಾ ಬೇರೆ ಎನ್ನನಳಲಿಸಿ ಕಾಡಿತ್ತು ತಾ ಬೇರೆ ಎನ್ನ ಬಳಲಿಸಿ ಕಾಡಿತ್ತು. ಕೂಡಲಸಂಗನ ಕೂಡಿಹೆನೆಂದಡೆ ತಾನೆನ್ನ ಮುಂದುಗೆಡಿಸಿತ್ತು ಮಾಯೆ. 14