ನಾಮರೂಪು ಕ್ರೀಗಳೇನುಯೇನೂ ಇಲ್ಲದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಾಮರೂಪು ಕ್ರೀಗಳೇನುಯೇನೂ ಇಲ್ಲದ ನಿತ್ಯನಿರಂಜನ ಪರವಸ್ತು ತಾನೆ ನಿರಂಜನಪ್ರಣವ ನೋಡಾ. [ಆ] ನಿರಂಜನ ಪರವಸ್ತುವಿನಲ್ಲಿ ಪರಮ ಚಿತ್ಕಲೆ ಉದಯವಾಗಿ
ಆ ಚಿದ್ರೂಪ ಕಲೆಯ ಶುದ್ಧಪ್ರಣವವೆನಿಸಿತ್ತು ನೋಡಾ. ಆ ಶುದ್ಧ ಪ್ರಣವದಲ್ಲಿ ಚಿತ್ತು; ಆ ಚಿತ್ತೇ ಸಚ್ಚಿದಾನಂದಸ್ವರೂಪವನುಳ್ಳುದಾಗಿ
ಚಿತ್‍ಪ್ರಣವವೆನಿಸಿತ್ತು ನೋಡಾ. ಆ ಚಿತ್ ಪ್ರಣವಸ್ವರೂಪವಪ್ಪ ಪರತತ್ವದಲ್ಲಿ ಪರಶಕ್ತಿ ಉದಯವಾಯಿತ್ತು. ಆ ಪರಶಕ್ತಿಯಿಂದ ನಾದ ಬಿಂದು ಕಳೆಗಳಾದವಯ್ಯ. ಆಕಾರವೇ ನಾದ
ಉಕಾರವೇ ಬಿಂದು
ಮಕಾರವೇ ಕಳೆ; ಇಂತೀ ಮೂರಕ್ಕೆ ಪರಶಕ್ತಿಯೇ ತಾಯಿ. ಇಂತೀ ನಾಲ್ಕು ಒಂದಾದಲ್ಲಿ ಪ್ರಣವವಾಯಿತ್ತಯ್ಯ. ಆ ಪ್ರಣವವೇ ಪಂಚಲಕ್ಷಣವಾಯಿತ್ತು; ಅದೆಂತೆಂದಡೆ: ತಾರಕಾಕೃತಿ
ದಂಡಕಾಕೃತಿ
ಕುಂಡಲಾಕೃತಿ
ಅರ್ಧಚಂದ್ರಾಕೃತಿ ಬಿಂದುಕೃತಿ. ಇಂತೀ ಪಂಚಾಕೃತಿಯಾಯಿತ್ತಯ್ಯ. ತಾರಕಾಕೃತಿಯಲ್ಲಿ ನಕಾರ ಜನನ; ದಂಡಕಾಕೃತಿಯಲ್ಲಿ ನಕಾರ ಜನನ. ಕುಂಡಲಾಕೃತಿಯಲ್ಲಿ ಶಿಕಾರ ಜನನ. ಅರ್ಧಚಂದ್ರಾಕೃತಿಯಲ್ಲಿ ವಕಾರ ಜನ. ಬಿಂದುಕೃತಿಯಲ್ಲಿ ಯಕಾರ ಜನನ. ಇಂತೀ ಪ್ರಣವದಿಂದ ಪಂಚಾಕ್ಷರ[ಂ]ಗಳುತ್ಪತ್ತಿಯಾದವಯ್ಯ. ಪ್ರಣವವೇ ಕೂಡಿ
ಷಡಕ್ಷರವೆಂದು ಹೇಳಲ್ಪಟ್ಟಿತಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.