ನಾಲಗೆ ತಾಗಿದ ರುಚಿಗೆ ಮನವೇ ಸಾಕ್ಷಿ ಸಾಲದೆ ಅಯ್ಯಾ ಮಾಲೆಗಾರನ ಕೇಳಿ ನನೆಯರಳುವುದೆ ಆಗಮವನಿದಿರಿಂಗೆ ತೋರುವುದು ಆಚಾರವೆ ಅಯ್ಯಾ ನಮ್ಮ ಕೂಡಲಸಂಗನ ಕೂಡಿದ ಕೂಟದ ಕರುಳ ಕಲೆಯನಿದಿರಿಂಗೆ ತೋರುವುದು ಆಚಾರವೆ ಅಯ್ಯಾ