ನಾಳೆ ಬಪ್ಪುದು ನಮಗಿಂದೆ ಬರಲಿ ಇಂದು ಬಪ್ಪುದು ನಮಗೀಗಲೆ ಬರಲಿ ಇದಕಾರಂಜುವರು ಇದಕಾರಳುಕುವರು `ಜಾತಸ್ಯ ಮರಣಂ ಧ್ರುವಂ' ಎಂದುದಾಗಿ ನಮ್ಮ ಕೂಡಲಸಂಗಮದೇವರು ಬರೆದ ಬರೆಹವ ತಪ್ಪಿಸುವಡೆ ಹರಿಬ್ರಹ್ಮಾದಿಗಳಿಗಳವಲ್ಲ.