ನಿಚ್ಚಕ್ಕೆ ನಿಚ್ಚ ಒತ್ತೆಯ ಬೇಡಿದಡೆ ಅಚ್ಚುಗವಾಯಿತ್ತಯ್ಯಾ ನಮ್ಮ ನಲ್ಲಂಗೆ. ಕಿಚ್ಚನೆ ಹೊತ್ತುಕೊಂಡು ಅರ್ಚನೆಯನಾಡಲು ಅಚ್ಚುಗವಾಯಿತ್ತವ್ವಾ ನಮ್ಮ ನಲ್ಲಂಗೆ. ಅರ್ಚನೆಯ ಗಳಿಹವ ನಿಳುಹಿದಡೆ ಬಳಿಕ ನಿಶ್ಚಿಂತವಾಯಿತ್ತು ಗುಹೇಶ್ವರಾ