ನಿಜರೂಪು ರೂಪಿನಿಂದ ನಿಂದಿತ್ತು ಆ ರೂಪು ನಿಜರೂಪವನವಗ್ರಹಿಸಿತ್ತು. ನಿಜರೂಪು ನಿರ್ಣಯದಲ್ಲಿ ನಿಂದ ನಿಜಶರಣರ ನಿಲವ ಕಾಯವಿಡಿದು ಕಂಡಹೆನೆಂದಡೆ ಕಾಣಬಹುದೆ ಕೂಡಲಸಂಗಮದೇವಾ ನಿಮ್ಮ ಶರಣರ ನಿಲವು ಎನಗೆ ಸಾಧ್ಯವಪ್ಪುದೆ