ನಿಮ್ಮಲ್ಲಿ ಭಕ್ತಿಯುಂಟು, ತಮ್ಮಲ್ಲಿ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಿಮ್ಮಲ್ಲಿ ಭಕ್ತಿಯುಂಟು
ತಮ್ಮಲ್ಲಿ ಭಕ್ತಿಯುಂಟು ಎಮ್ಮಲ್ಲಿ ಭಕ್ತಿಯುಂಟು ಎಂದಡೆ ಶಿವಶರಣರು ಮೆಚ್ಚುವರೆ ? ಹೂಸಿ ಹುಂಡನೆ ಮಾಡಿ ಬಾಯ ಸವಿಯ ನುಡಿವರೆಲ್ಲಾ ಭಕ್ತರಪ್ಪರೆ ? ಮಾತಿನ ಅದ್ವೈತವ ಕಲಿತು ಮಾರುಗೋಲ ಬಿಡುವರೆಲ್ಲ ಭಕ್ತರಪ್ಪರೆ ? ಬೆಳ್ಳಿಗೆಯ ಮಕ್ಕಳೆಂದಡೆ ಬಳ್ಳವಾಲ ಕರೆವವೆ ಮರುಳೆ ? ಸಂಗನಬಸವಣ್ಣನೆಂದರೆ ಮಾತಿನ ಮಾತಿಂಗೆಲ್ಲ ಭಕ್ತಿಯುಂಟೆ ? ಬಂದ ಜಂಗಮದ ಇಂಗಿತಾಕಾರವನರಿದು
ಇದಿರೆದ್ದು ವಂದಿಸಿ
ಕೈಮುಗಿದು ನಡುನಡುಗಿ ಕಿಂಕಿಲನಾಗಿ
ಭಯಭೀತಿ ಭೃತ್ಯಾಚಾರವಾಗಿ ಇರಬಲ್ಲಡೆ ಅದು ಭಕ್ತಿ
ಅದು ವರ್ಮ ! ಬಂದವರಾರೆಂದರಿಯದೆ
ನಿಂದ ನಿಲವರಿಯದೆ ಕೆಮ್ಮನೆ ಅಹಂಕಾರವ ಹೊತ್ತುಕೊಂಡಿಪ್ಪವರ ನಮ್ಮ ಗುಹೇಶ್ವರಲಿಂಗನೊಲ್ಲ ನೋಡಾ !