ನಿರಾಳವೆಂಬ ಕೂಸಿಂಗೆ ಬೆಣ್ಣೆಯನಿಕ್ಕಿ ಹೆಸರಿಟ್ಟು ಕರೆದವರಾರೊ ? ಅಕಟಕಟಾ ಶಬ್ಧದ ಲಜ್ಜೆ[ಯ] ನೋಡಾ ! ಗುಹೇಶ್ವರನರಿಯದ ಅನುಭಾವಿಗಳೆಲ್ಲರ ತರಕಟ ಕಾಡಿತ್ತು.