ನಿವೇದನೆ
ಸಂಪಾದಿಸಿ- ಕವಿ: ಡಿ.ವಿ.ಜಿ.
ವನಸುಮದೊಳೆನ್ನ ಜೀವನವು ವಿಕಸಿಸುವಂತೆ
ಮನವನನುಗೊಳಿಸು ಗುರುವೇ
ಜನಕೆ ಸಂತಸವೀವ ಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ಬಿಡದೆ||ವನಸುಮದೊಳೆನ್ನ ಜೀವನವು ---
ಕಾನನದಿ ಮಲ್ಲಿಗೆಯು ಮೌನದಿಂಬಿರಿದು ನಿಜ
ಸೌರಭವ ಸೂಸಿ ನಲವಿಂ
ತಾನೆಲೆಯ ಪಿಂತಿರ್ದು ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತ ಕೃತ್ಯತೆಯ ಪಡೆವಂತೆ ||ವನಸುಮದೊಳೆನ್ನ ಜೀವನವು ---
ಉಪಕಾರಿ ನಾನು ಎನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನಳಿದೂ
ವಿಪುಲಾಶ್ರಯವನೀವ ಸುಫಲ ಸುಮಭರಿತ
ಪಾದಪದಂತೆ ನೈಜಮಾ ದೊಳ್ಪಿನಲಿ ಬಾಳ್ವವೊಲು||ವನಸುಮದೊಳೆನ್ನ ಜೀವನವು --- [೧][೨][೩]
ನೋಡಿ
ಸಂಪಾದಿಸಿ- ಬಯಕೆ -(ಇಂಗ್ಲಿಷ್ ಕವನದ ಅನುವಾದ)
- ಪ್ರಿಯತಮೆಗೆ
- ನಿವೇದನ ಡಿ.ವಿ.ಜಿ.
ಪರಿವಿಡಿ
ಸಂಪಾದಿಸಿಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ
ಸಂಪಾದಿಸಿ- ↑ ನಿವೇದನ ಕವನಸಂಗ್ರಹ- ಡಿ.ವಿ.ಜಿ
- ↑ http://chitra-durga.blogspot.com/2008/05/blog-post.html chitradurga blogspot
- ↑ DVG ;Remembering the legacy