ನಿಶ್ಚಲವೆಂಬ ಭಾಜನದಲ್ಲಿ ನಿಜಜ್ಞಾನವೆಂಬ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಿಶ್ಚಲವೆಂಬ ಭಾಜನದಲ್ಲಿ ನಿಜಜ್ಞಾನವೆಂಬ ಅಕ್ಕಿಯ ತುಂಬಿ
ಪರಮಾನಂದವೆಂಬ ಜಲವನೆರೆದು
ಸ್ವಯಂ ಪ್ರಕಾಶವೆಂಬ ಅಗ್ನಿಯಿಂದ ಪಾಕವಾದ ಲಿಂಗದೋಗರವು ಮಹಾಘನದಲ್ಲಿ ನಿಂದು ಘನತೃಪ್ತಿಯನೀವುತ್ತಿದ್ದಿತ್ತು ಕಾಣಿರೆ ! ಅದ ಕಣ್ಣಿಲ್ಲದೆ ಕಂಡು ಕೈಯಿಲ್ಲದ ಕೊಂಡು ಬಾಯಿಲ್ಲದೆ ಉಂಡ ತೃಪ್ತಿಯ
ಅರಿವಿಲ್ಲದ ಅರಿವಿನಿಂದ ಅರಿದು
ಸುಖಿಯಾದೆ ನಾನು ಗುಹೇಶ್ವರಾ.