ನಿಷ್ಠೆಯುಳ್ಳಾತಂಗೆ ನಿತ್ಯನೇಮದ ಹಂಗೇಕೆ ? ಸತ್ಯವುಳ್ಳಾತಂಗೆ ತತ್ವವಿಚಾರದ ಹಂಗೇಕೆ ? ಅರಿವುಳ್ಳಾತಂಗೆ ಅಗ್ಘವಣಿಯ ಹಂಗೇಕೆ ? ಮನಶುದ್ಧವುಳ್ಳವಂಗೆ ಮಂತ್ರದ ಹಂಗೇಕೆ ? ಭಾವ ಶುದ್ಧವುಳ್ಳವಂಗೆ ಹೂವಿನ ಹಂಗೇಕೆ ? ಕೂಡಲಚೆನ್ನಸಂಗಯ್ಯಾ ನಿಮ್ಮನರಿದಾತಂಗೆ ನಿಮ್ಮ ಹಂಗೇಕೆ ?