ನಿಷ್ಠೆ ಘಟಿಸಿ ಕ್ರಿಯವಗ್ರಹಿಸಿ ಭಾವಭರಿತವಾಗಿ ಜ್ಞಾನವೆ ಅಂಗವಾಗಿ ಕ್ರಿಯೆ ಪ್ರಾಣವಾಗಿ
ಮತ್ತೆ ಜ್ಞಾನವೆ ಪ್ರಾಣವಾಗಿ ಕ್ರಿಯೆ ಅಂಗವಾಗಿ ಅಂಗಮನಕ್ರಿಭಾವ ಈ ಚತುರ್ವಿಧವೊಂದಾಗಿ
ಮತ್ತೆ ನಿಷ್ಠೆಘಟಿಸಿ ಕ್ರಿಜ್ಞಾನ ಎರಡ ವಿೂರಿನಿಂದ ಭಕ್ತವಿರಕ್ತನ ತೂರ್ಯದ ಕ್ರಿಯೆ ವೇಧಿಸಿ ನಿಂದವನ ನಿಲವು ಎಂತುಟೆಂದರೆ: ಕ್ರಿಯೆಂದರೆ ಇಷ್ಟಲಿಂಗ
ಅಂಗವೆಂದರೆ ಪ್ರಾಣಲಿಂಗ. ಆ ಪ್ರಾಣಲಿಂಗವ ಇಷ್ಟಲಿಂಗದಲ್ಲಡಗಿಸಿಕೊಂಡು ನಿಂದುದು ಎರಡಾಗಿ ಭಕ್ತನೆಂದು ಮಾಹೇಶ್ವರನೆಂದು ನಿಷ್ಠೆಯಲ್ಲಿ ನೆರೆನಿಂದಿರಲು ಮತ್ತಾ ನಿಷ್ಠೆಪಸರಿಸಿ ಆ ಭಕ್ತಮಾಹೇಶ್ವರರು ತಮ್ಮ ಮುನ್ನಿನ ನಿಷ್ಠೆಯ ಬಳಿಗೆ ಬಂದು ಎನ್ನಕ್ರಿ ನಿಮ್ಮಲ್ಲಿಯೇ ಅಡಗಿತ್ತು ಆ ಮುಕ್ತತ್ವದ ಕ್ರಿಯೊಳಗೊಂಡು ದೃಷ್ಟವ ಕಂಡು ಬರ....ಕೇಳಲಾಗಿ
ಎನ್ನ ಇಷ್ಟವಾಸರಿಸಿತ್ತೆಂದು ಹೇಳಲು ಸುಮ್ಮನೆ ಅವನ ಕೂಡೆ ಪ್ರಸಂಗಿಸಲಾಗದು. ಅದೇನು ಕಾರಣವೆಂದರೆ: ಮೊಟ್ಟ ಮೊದಲಲ್ಲಿ ಮೂರು ಭಿನ್ನವ ಕೇಳುವದು ಆ ಮೂರು ಭಿನ್ನಯೆಂತಾದವಯ್ಯಯೆಂದರೆ
ಅದರೊಳಗೈದು ಭಿನ್ನ ಉಂಟು. ಇಂತೀ ಎಂಟರೊಳಗೆ ನಾಲ್ಕು ಲಿಂಗದ ನೆಲೆ ಸಿಕ್ಕಿದರೆ ಅವೆಲ್ಲರಲ್ಲಿ ಬಂಧಿಸೂದು. ಅದಲ್ಲದೆ ನಿಂದರೆ ಮುಂದಣ ನಾಲ್ಕು ಅವನ ಭಾವವ ತೊರೆದು ನೋಡೂದು. ನೋಡಿ ನಿಶ್ಚಯವಾದ ಮತ್ತೆ ಕೂಡೆಯಿಟ್ಟುಕೊಂಡಿರ್ಪ ಸಮಯದಲ್ಲಿ
ಮೂಲಾಗ್ನಿಯ ಜ್ವಾಲೆಯಿಂದ ಮೇಲುವಾಯ್ದು ಒತ್ತಿಲಿರ್ದ ತನ್ನ ತೆತ್ತಿಗರ ನಿಲ್ಲದಂತೆ ನೀಕರಿಸುತ್ತಿರಲು
ಸಲಹಲಾರದ ತಾಯಿ ಶಿಶುವ ಬೈದು ಕೊಲುವಂತೆ ತಮ್ಮ ತ್ಯಾಗದ ಮೈಮರೆದಿರ್ದಾತನ ಎಚ್ಚರ ಮಾಡಿ
ನೀ ಮುನ್ನಲಿಂತಹವನೆಂದೆ ನುಡಿದು ಹೋಗುವ ನಿಷ್ಠೆ ಭಂಡರ ಗುಹೇಶ್ವರ ಸಾಕ್ಷಿಯಾಗಿ ಅಲ್ಲಯ್ಯನೊಲ್ಲ ಸಂಗನಬಸವಣ್ಣಾ.