ನೀನಿಕ್ಕಿದ ಬೀಯದಲ್ಲಿ ವಂಚನೆಯುಳ್ಳಡೆ ಸಂಗಾ ನಿಮ್ಮ ತೊತ್ತುತನಕ್ಕೆ ದೂರವಯ್ಯಾ. ಕದ್ದು ತಿಂದಡೆ ಕೈಹಿಡಿದೊಮ್ಮೆ ಬಡಿದು ತುಡುಗುಣಿತನವ ಬಿಡಿಸಯ್ಯಾ. ಜಂಗಮ ಮನೆಗೆ ಬಂದಲ್ಲಿ ಓಸರಿಸಿದಡೆ ಹಿಡಿದು ಮೂಗ ಕೊಯ್ಯಯ್ಯಾ ಕೂಡಲಸಂಗಮದೇವಾ. 434