ನೀನೊಲಿದಡೆ ಕೊರಡು ಕೊನರುವುದಯ್ಯಾ ನೀನೊಲಿದಡೆ ಬರಡು ಹಯನಹುದಯ್ಯಾ ನೀನೊಲಿದಡೆ ವಿಷವೆಲ್ಲ ಅಮೈತವಹುದಯ್ಯಾ ನೀನೊಲಿದಡೆ ಸಕಲ ಪಡಿಪದಾರ್ಥ ಇದಿರಲ್ಲಿರ್ಪುವು ಕೂಡಲಸಂಗಮದೇವಾ. 66