ನೀನೊಲಿದಡೆ ಜಗವೆಲ್ಲ ಜಗವೆಲ್ಲ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನೀನೊಲಿದಡೆ ಜಗವೆಲ್ಲ ಕೊಂಡಾಡುತಿರ್ಪುದು ನೋಡಾ ; ನೀನೊಲಿಯದಿರ್ದಡೆ ಜಗವೆಲ್ಲ ಹೊತ್ತುಗಲ್ಲ ಹೊತ್ತಿರ್ಪುದು ನೋಡಾ. ನೀನೊಲಿದಡೆ ವೈರಿಗಳೆಲ್ಲ ಸಖರಪ್ಪರು ನೋಡಾ ; ನೀನೊಲಿಯದಿರ್ದಡೆ ಸಖರೆಲ್ಲ ವೈರಿಗಳಾಹರು ನೋಡಾ. ನೀನೊಲಿದಡೆ ಬಾರದ ಪದಾರ್ಥ ಬಪ್ಪುದು ನೋಡಾ; ನೀನೋಲಿಯದಿರ್ದಡೆ ಬರ್ಪುದು ಬಾರದೆ ಹೋಹುದು ನೋಡಾ. ಇದು ಕಾರಣ
ನಿಮ್ಮ ಒಲುಮೆಯಿಂದ ಘನವು ಆವುದು ಇಲ್ಲ ನೋಡಾ ಅಖಂಡೇಶ್ವರಾ.