ನೀರಲೊಗೆದ ಮರಕ್ಕೆ ಕಾಣಬಾರದ ನೆಳಲು ! ಬೀಜವಿಲ್ಲದ ಮರನ ಹೆಸರೇನೆಲವೊ ? ಇದನೇನ ಬಲ್ಲಿರಿ ? ಇದನೇನ ಬಲ್ಲಿರಿ ? ಅರಿವಿನ ಮರೆಯ ಘನಕ್ಕೆ ಘನವಾದುದ ! ಕಾಸಲಿಲ್ಲದ ತುಪ್ಪ ವಾಸನೆಯಿಲ್ಲದ ಪರಿಮಳ ! ಗುಹೇಶ್ವರನಿಪ್ಪ ನಿರಾಳವ ನೋಡಯ್ಯಾ.