ನೀರೂ ನೆಳಲೂ ಇಲ್ಲದಂದು ಷಡುಶೈವ (ದೈವ ?) ರಿಲ್ಲದಂದು. ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು ಪಿಂಡಾಂಡ ಅಂಡ ಅಂಡಾವಳಿಗಳಿಲ್ಲದಂದು ಅಖಂಡಿತ ಜ್ಯೋತಿರ್ಮಯಲಿಂಗ ಶರಣನ ಲೀಲೆಯಿಂದಾದ ಏಳು ತರದ ಗಣಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.