Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನೀವು ನಿಮ್ಮ ಸ್ವಲೀಲೆಯಿಂದೆ ಜಗದಲೀಲಾ ವೈಭವಂಗಳ ನಟಿಸಬೇಕೆಂದು ನಿಮ್ಮಲ್ಲಿ ನೆನಹುದೋರಲು
ಆ ನೆನಹು ನಿರ್ಧರಿಸಿ
ಚಿತ್ತೆನಿಸಿತ್ತು. ಆ ಚಿತ್ತಿನಿಂದೆ ಚಿನ್ನಾದ ಚಿದ್ಬಿಂದು ಚಿತ್ಕಳೆಗಳೊಗೆದವು. ಆ ಚಿನ್ನಾದ ಚಿದ್ಬಿಂದು ಚಿತ್ಕಳೆ ಆ ಮೂಲಚಿತ್ತು ಸಹವಾಗಿ ಗಟ್ಟಿಗೊಂಡು ಅಖಂಡ ಗೋಳಕಾಕಾರ ತೇಜೋಮೂರ್ತಿಯಪ್ಪ ಮಹಾಲಿಂಗವಾಯಿತ್ತು. ಆ ಮಹಾಲಿಂಗವೇ ಪಂಚಮುಖವನೈದಿಹ ಸದಾಶಿವನೆಂದೆನಿಸಿತ್ತು. ಆ ಸದಾಶಿವನಿಂದೆ ಬ್ರಹ್ಮ-ವಿಷ್ಣು-ರುದ್ರರೆಂಬ ತ್ರೈಮೂರ್ತಿಗಳುದಿಸಿದರು. ಆ ತ್ರೈಮೂರ್ತಿಗಳಿಂದೆ ಸ್ವರ್ಗ-ಮತ್ರ್ಯ-ಪಾತಾಳಂಗಳೆಂಬ ತ್ರೈಲೋಕಂಗಳು ಜನಿಸಿದವು. ಆ ತ್ರೈಲೋಕಂಗಳ ಮಧ್ಯದಲ್ಲಿ ಸಚರಾಚರ ಹೆಣ್ಣುಗಂಡು ನಾಮ ರೂಪ ಕ್ರಿಯಾದಿ ಸಕಲ ವಿಸ್ತಾರವಾಯಿತ್ತು. ಇಂತಿವೆಲ್ಲವೂ ನಿಮ್ಮ ನೆನಹುಮಾತ್ರದಿಂದಾದವಯ್ಯ ಅಖಂಡೇಶ್ವರಾ.