Pages(key to [[Help:Page Status{{!}}Page Status]])
ನೀವು ಹಿರಿಯರೆಂಬಿರಿ ಕರ್ಮಿಗಳು ನೀವು ಕೇಳಿರಿ ನಿಮ್ಮ ವೇದಶಾಸ್ತ್ರಂಗಳು ಆರ ಹೊಗಳುತ್ತಿದ್ದಾವು `ಓಂ ದ್ಯಾವಾ ಭೂಮೀ ಜನಯನ್ ದೇವ ಏಕಃ' ಎಂದು ಶ್ರುತಿ ಸ್ಮøತಿಗಳು ಸಾರುತ್ತಿದ್ದಾವು. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬುದು ಹುಸಿ `ವರ್ಣಾನಾಂ ಗುರುಃ' ನಮ್ಮ ಕೂಡಲಸಂಗನ ಶರಣರು.