ನೀ ನಾನೆಂಬ ಭಾವವಾರಿಂದಾಯಿತ್ತು ಹೇಳಾ? ನೀನೆಂಬುದು ಅಜ್ಞಾನ ನಾನೆಂಬುದು ಮಾಯಾಧೀನ. ನೀನೆನ್ನದೆ ನಾನೆನ್ನದೆ ಇಪ್ಪ ಸುಖವ ಭಿನ್ನವಿಲ್ಲದೆ ಅರಿಯಬಲ್ಲಡೆ; ಆ ಸುಖ ನಿಮಗರ್ಪಿತ ಕಾಣಾ ಗುಹೇಶ್ವರಾ.