ನುಡಿಗೆಡೆಗೊಡದ ಘನವ ಹಿಡಿದು ಒಡಬಂದಿಯಾಳು. ಎಡೆಯಿಲ್ಲದ ಪರಿಪೂರ್ಣದೊಳಗೆ ನಡೆನುಡಿಗೆಟ್ಟಳು. ತನ್ನ ನಿಲುಕಡೆಯ ನಿಜವ ತಾನರಿಯದಂತೆ ಎನ್ನಿಂದ ಕೇಳಿ ಸ್ವಯವಾದಳು. ಗುಹೇಶ್ವರಲಿಂಗ ಸಾಕ್ಷಿಯಾಗಿ ಮಹಾದೇವಿಯಕ್ಕನ ನಿಲವ ಕೊಂಡಾಡುವುದಕ್ಕೆ ತೆರಹಿಲ್ಲ ಕಾಣಾ ಮಡಿವಾಳಯ್ಯ.