ನೆನೆ ಎಂದಡೆ ಏನ ನೆನೆವೆನಯ್ಯಾ? ಎನ್ನ ಕಾಯವೆ ಕೈಲಾಸವಾಯಿತ್ತು ಮನವೆ ಲಿಂಗವಾಯಿತ್ತು ತನುವೆ ಸೆಜ್ಜೆಯಾಯಿತ್ತು. ನೆನೆವಡೆ ದೇವನುಂಟೆ? ನೋಡುವಡೆ ಭಕ್ತನುಂಟೆ? ಗುಹೇಶ್ವರಲಿಂಗ ಲೀಯವಾಯಿತ್ತು.