Pages(key to [[Help:Page Status{{!}}Page Status]])
ನೆಲದ ಬೊಂಬೆಯ ಮಾಡಿ ಜಲದ ಬಣ್ಣವನುಡಿಸಿ ಹಲವು ಪರಿಯಾಶ್ರಿ(ಶ್ರ?)ಮದಲ್ಲಿ ಉಲಿವ ಗೆಜ್ಜೆಯ ಕಟ್ಟಿ ವಾಯುವನಲನ ಸಂಚಕ್ಕೆ ಅರಳೆಲೆಯ ಶೃಂಗಾರವ ಮಾಡಿ ಆಡಿಸುವ ಯಂತ್ರವಾಹಕನಾರೊ ? ಬಯಲ ಕಂಬಕ್ಕೆ ತಂದು ಸಯವೆಂದು ಪರವ ಕಟ್ಟಿದಡೆ ಸಯವದ್ವಯವಾಯಿತ್ತು_ಏನೆಂಬೆನು ಗುಹೇಶ್ವರಾ !