ನೆಲ ಹುಟ್ಟದಂದಿನ ಧವಳಾರ ಧವಳಾರದೊಳಗೊಬ್ಬ ಸೂಳೆ ನೋಡಯ್ಯಾ. ತಲೆಯಿಲ್ಲದಾತ ನಿಚ್ಚಕ್ಕೆ ಬಪ್ಪ ಕರುಳಿಲ್ಲದಾತ ಕುಂಟಿಣಿಯಾದ ನೋಡಯ್ಯಾ. ಕೈಕಾಲಿಲ್ಲದೆ ಅಪ್ಪಲೊಡನೆ !_ ಇದ ಕಂಡು ಬೆರಗಾದೆ ಗುಹೇಶ್ವರಾ.