ಪಂಡಿತನಾಗಲಿ ಮೂರ್ಖನಾಗಲಿ ಸಂಚಿತಕರ್ಮ ಉಂಡಲ್ಲದೆ ಮಾಣದು ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದೆಂದು ಶ್ರುತಿ ಸಾರುತ್ತೈದಾವೆ ನೋಡಾ. ತಾನಾವಾವ ಲೋಕದೊಳಗಿದ್ದಡೆಯೂ ಬಿಡದು ಕರ್ಮಫಲಗೂಡಿ ಕೂಡಲಸಂಗಮದೇವಂಗೆ ಆತ್ಮನೈವೇದ್ಯವ ಮಾಡಿದವನೆ ಧನ್ಯ.