ಪದ್ಮಾಸನದಲ್ಲಿ ಕುಳ್ಳಿರ್ದು, ಕುಂಡಲಿಯ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪದ್ಮಾಸನದಲ್ಲಿ ಕುಳ್ಳಿರ್ದು
ಕುಂಡಲಿಯ ಸ್ಥಾನವನರಿದು
ಅಂಡಲೆವ ಅಧೋವಾಯುವ ಊಧ್ರ್ವಮುಖವ ಮಾಡಿ ಷಡಂಗುಲವನೊತ್ತಿ ಊಧ್ರ್ವವಾಯುವನಧೋಮುಖಕ್ಕೆ ತಂದು ಉತ್ತರಪೂರ್ವದಕ್ಷಿಣವನತಿಗಳೆದು ಪಶ್ಚಿಮದ ಸುಷುಮ್ನೆಯಲ್ಲಿ ಮನಶ್ಶಕ್ತಿಸಂಧಾನಸಂಯೋಗದಿಂದ ಸಹಸ್ರದಳಕಮಲದಲ್ಲಿ ನಾದಬ್ರಹ್ಮವನೆಯ್ದಿ
ಮಹಾವಾಸನಾಮೃತವ ದಣಿಯುಂಡು ತ್ರಿಸಂಧಾನ ಒಂದಾದ ಬಳಿಕ_ಆತ್ಮ ಪರಮಾತ್ಮ ಇಂತಾಗಿ
ಅಂತರಾತ್ಮ ವಿಚಾರಕ್ಕೆ ಇಳಿದಲ್ಲಿ ಅಭ್ಯಾಸಕ್ಕೆ ಬರಲಾಗದು. ಅದೆಂತೆಂದಡೆ:ದೇವಲೋಕಕ್ಕೆ ಸಂದು ಮರಳಿ ಮಾನವನಪ್ಪಡೆ ಅದೇ ಪಾತಕ ಹಸಿದವನಮೃತವನುಂಡು
ಮರಳಿ ಹಸಿದು
ಉಂಡಿಹೆನೆಂದಡೆ ಅದೇ ಪ್ರಕೃತಿ ಗುಣ. ಇದು ಕಾರಣ_ಪರಮಾತ್ಮ ತಾನಾದಾತನು
ಪರಮಾತ್ಮ ತಾನಾದನಾಗಿ ತನ್ನಲ್ಲಿ ತಾನೆ ಏಕೀ ಭವಿಸಿರಬೇಕು
ಗುಹೇಶ್ವರಾ.