ಪರಶಕ್ತಿ ಶಾಂತಿಯೆನಲು ಪರಶಿವಶಕ್ತಿಯ



Pages   (key to Page Status)   


ಪರಶಕ್ತಿ ಶಾಂತಿಯೆನಲು ಪರಶಿವಶಕ್ತಿಯ ನಾಮವೀಗ. ನಾದ ಬಿಂದು ಕಳೆ ಕಳಾನ್ವಿತ ಈ ನಾಲ್ಕು ನಿಃಕಲತತ್ವಯೋಗಿಗಳ ಧ್ಯಾನ
ಭಕ್ತರ ಪೂಜೆ
ವೇದಾಗಮಂಗಳ ಶ್ರುತಕ್ಕೆ ಅತೀತವಾಗಿ
ವಾಙ್ಮನಾತೀತವಾಗಿ
ಆ ವಾಙ್ಮನಕ್ಕಗೋಚರವಾದ ನಿಃಕಲತತ್ವವೇ ಸಕಲ ನಿಃಕಲವಾಗಿ ತೋರಿತ್ತದೆಂತೆಂದೊಡೆ ಸದಾಶಿವತತ್ವ
ಈಶ್ವರತತ್ವ
ಮಹೇಶ್ವರತತ್ವ ಈ ಮೂರು ಸಕಲ ನಿಃಕಲತತ್ವಯೋಗಿಗಳ ಧ್ಯಾನವ ಕೈಕೊಂಡು
ಭಕ್ತರ ಪೂಜೆಯ ಕೈಕೊಂಡು
ಜಪ ತಪ
ನೇಮ ನಿತ್ಯ
ವೇದಾಗಮಂಗಳ ಸ್ತುತಿಯನು ಕೈಕೊಂಡು
ಜಗದುತ್ಪತ್ತಿಕಾರಣ ಪರಶಿವನ ಸಂಕಲ್ಪದಿಂದ
ನಾದ ಬಿಂದು ಕಳೆ ಸಮೇತವಾಗಿ ಲಿಂಗವೆನಿಸಿತ್ತು. ಅದಕ್ಕೆ ಕರ ಚರಣಾದ್ಯವಯವಂಗಳಿಲ್ಲ. ಅಖಂಡ ಪರಿಪೂರ್ಣ ಗೋಳಕಾಕಾರ ತೇಜೋಮೂರ್ತಿ ಸ್ವರೂಪನುಳ್ಳದು. ವ್ಯಕ್ತ ಅವ್ಯಕ್ತ ಆನಂದ ಸುಖಮಯವಾಗಿದ್ದಂತಾದು. ಅನಂತಕೋಟಿ ಬ್ರಹ್ಮಾಂಡಗಳ ತನ್ನಲ್ಲಿ ಗರ್ಭೀಕರಿಸಿಕೊಂಡು
ಅನಂತಕೋಟಿ ಸೋಮ ಸೂರ್ಯಪ್ರಕಾಶವನುಳ್ಳ ಪರಂಜ್ಯೋತಿರ್ಲಿಂಗವು ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.