ಪರಾತ್ಪರವಾದ : ವಸ್ತುವನೊಡಗೂಡಿದ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪರಾತ್ಪರವಾದ ವಸ್ತುವನೊಡಗೂಡಿದ ಪ್ರಾಣಲಿಂಗಿಯ ಒಡಲ ಬೆಡಗಿನ ಗಡಣವೆಂತಿರ್ಪುದೆಂದಡೆ : ಸ್ಫಟಿಕದ ಘಟದೊಳಗೆ ಜ್ಯೋತಿಯನಿರಿಸಿದಂತೆ
ಕತ್ತಲೆಯ ಮನೆಯಲ್ಲಿ ರತ್ನವ ಹರಡಿದಂತೆ ರನ್ನದ ಗಿರಿಗೆ ರವಿಕೋಟಿ ಕಿರಣಂಗಳು ಮುಸುಕಿದಂತೆ
ಬೆಳಗು ಹಳಚಿದ ಮಹಾಬೆಳಗಿನೊಬ್ಬುಳಿಯನೊಳಕೊಂಡು ಘನಗಂಭೀರವಾದ ಪ್ರಾಣಲಿಂಗಿಗಳ ಪಾದಕಮಲದಲ್ಲಿ ಸದಮಲ ತುಂಬಿಯಾಗಿರಿಸಯ್ಯಾ ಎನ್ನ ಅಖಂಡೇಶ್ವರಾ.