ಪಾದಾರ್ಚನೆಯ ಮಾಡುವೆನಯ್ಯಾ ಪಾದೋದಕದ ಹಂಗಿಗೆ. ಶರಣಾರ್ಥಿಯೆಂಬೆನಯ್ಯಾ ಒಕ್ಕುದ ಕೊಂಬ ಹಂಗಿಗೆ. ಎಡೆಯಾಟ ಕಡಬಡ್ಡಿಯ ಕೊಟ್ಟು ಕೆಟ್ಟಿತ್ತು ನೋಡಾ ಭಕ್ತಿ. ಕೂಡಲಸಂಗನ ಶರಣರ ನಿಲವನರಿಯದೆ ಮುಯ್ಯಿಗೆ ಮುಯ್ಯಾಗಿ ಕೆಟ್ಟಿತ್ತಯ್ಯಾ ಎನ್ನ ಭಕ್ತಿ.