ಈ ಪುಟವನ್ನು ಪರಿಶೀಲಿಸಲಾಗಿದೆ

೯೨

ಜನಪದ ಕಥೆಗಳು

ಚಿಕ್ಕವನು ಶ್ರೀಮಂತನ ಬಳಿಗೆ ಬರಲು ಆತನಿಗೆ — "ಈ ಆಸ್ತಿಯನ್ನೆಲ್ಲ ನೀನೆಂತು ಕಾಪಾಡಿಕೊಂಡು ಹೋಗಬಲ್ಲೆ? ಯಾವ ಯುಕ್ತಿಯನ್ನು ಅನುಸರಿಸುವಿ?” ಎಂದು ಕೇಳಿದನು.

ಆತನು ತನ್ನ ಜೀವನ ರೀತಿಂಯನ್ನು ಹೇಳುತ್ತಾನೆ — "ಒಂದು ದಾರದೆಳೆಗೆ ಒಂದು ರೊಟ್ಟಿ ಕಟ್ಟಿ ಅದನ್ನು ತೂಗಿಬಿಡುವುದು. ಹತ್ತಿರದಲ್ಲಿ ಒಂದು ತಂಬಿಗೆ ಕುಡಿಯುವ ನೀರನ್ನು ತುಂಬಿಟ್ಟುಕೊಳ್ಳುವದು. ಮೊದಲು ನೇತಾಡುವ ರೊಟ್ಟಿಯನ್ನು ಕಣ್ತುಂಬ ನೋಡಿ, ಆ ಬಳಿಕ ತಂಬಿಗೆಯೊಳಗಿನ ನೀರಿನ ಕಡೆಗೆ ಕಣ್ಣು ಹೊರಳಿಸಿದರೆ ತೀರಿತು ನನ್ನ ಊಟ. ತರುವಾಯ ಅಡಿಕೆಹೋಳು ಇದ್ದರೂ ಸರಿ, ಇರದಿದ್ದರೂ ಸರಿ. ಸಾಗಿತು ನಮ್ಮ ಗಾಡಿ."

ಶ್ರೀಮಂತನು ಚಿಕ್ಕವನ ಅರ್ಹತೆಗೆ ಮೆಚ್ಚಿ. ಆತನನ್ನು ಅಳಿಂಹುತನಕ್ಕೆ ಇಟ್ಟುಕೊಂಡು ಮಗಳನ್ನು ಕೊಟ್ಟು ಮದುವೆ ಮಾಡಿದನು.

ಅಳಿಯನೇ ಶ್ರೀಮಂತ ಆಸ್ತಿಗೆ ಒಡೆಯನಾಗಿ, ಆತನ ಸರಿಯದ ಸಂಪತ್ತನ್ನು ಉಪಭೋಗಿಸುತ್ತ ಸುಖದಿಂದ ಕಾಲಕಳೆಯಹತ್ತಿದನು.

 •