ಈ ಪುಟವನ್ನು ಪರಿಶೀಲಿಸಲಾಗಿದೆ

೧೪೦

ಜನಪದ ಕಥೆಗಳು

ಅತ್ತೆ ಬಾವಿಯಿಂದ ನೀರು ತಂದ ಬಳಿಕ ಅಳಿಯನನ್ನು ಊಟಕ್ಕೆ ಎಬ್ಬಿಸಿದಳು. ಮಣೆ ಹಾಕಿ ತಾಬಾಣ ಮುಂದಿಟ್ಟು ಪಾಯಸವನ್ನು ಎಡೆಬಡಿಸಿ, ತುಪ್ಪದ ಪಾತ್ರೆಯಲ್ಲಿ ಕಾದಸೂಜಿಚುಚ್ಚಿ ತಂದು ಪಾತ್ರೆಯನ್ನು ಬಗ್ಗಿಸಿ ಧಾರಾಳವಾಗಿ ನೀಡಿದಂತೆ ಮಾಡುವಷ್ಟರಲ್ಲಿ ಇಡಿಯ ತುಪ್ಪವು ಅಳಿಯನ ತಾಬಾಣದಲ್ಲಿ ಜಿಗಿದು ಬಿಟ್ಟಿತು. ಅದನ್ನು ಕಂಡು ಅತ್ತೆಯ ಹೊಟ್ಟೆ ಕಳವಳಿಸಿತು. ಇದ್ದಷ್ಟು ತುಪ್ಪವೆಲ್ಲ ಅಳಿಂತುನ ಪಾಲಾಗಿಬಿಟ್ಟರೆ, ನನ್ನ ಊಟಕ್ಕೇನು ಗತಿ — ಎಂದು ತಳಮಳಿಸತೊಡಗಿದಳು. ಆದರೆ ಆಕೆಗೆ ಕೂಡಲೇ ಒಂದು ಯುಕ್ತಿ ಹೊಳೆಯಿತು. ಏನಂದರೆ — "ಏನಪ್ಪ ಅಳಿಯ ದೇವರು, ನನ್ನ ಕಣ್ಣ ಮುಂದೆ ಬೆಳೆದ ಕೂಸು ನೀನು! ಒಂದೇ ತಾಬಾಣದಲ್ಲಿ ಕೂಡಿಕೊಂಡು ಉಂಡಿದ್ದೇವೆ ನಾವು. ನೀನು ದೊಡ್ಡವನಾಗಿರಬಹುದು. ಆದರೆ ನನಗೆ ನೀನು ಚಿಕ್ಕವನೇ. ಈಗಲೂ ಕೂಡಿಕೊಂಡೇ ಉಂಡರೆ ನನಗೆ ಸಮಾಧಾನ" ಎಂದವಳೇ ಅಳಿಂಹನ ಮುಂದೆ ಸರಿದು ಕುಳಿತು, ಆತನ ತಾಜಾಣದಲ್ಲಿಯೇ ಉಣ್ಣ ತೊಡಗಿದಳು.

ಅಳಿಯನಿಗೂ ಅದೇನು ಹೊಸ ಸಂಗತಿಯಲ್ಲ "ಆಗಲಿ' ಎಂದು ತಾಬಾಣವನ್ನು ಮುಂದಕ್ಕೆ ಸರಿಸಿದನು.

ಕರಗಿದ ತುಪ್ಪ ತನ್ನ ಕಡೆಗೆ ಹರಿದು ಬರುವಂತೆ ಅಭಿನಯ ಮಾಡಬೇಕಾದರೆ, ಅದಕ್ಕೆ ತಕ್ಕ ಭಾಷಣ ಬೇಡವೇ ? ಅದನ್ನು ಆರಂಭಿಸಿದಳು ಅತ್ತೆ.

"ಅಳಿಯನೆಂದರೆ ಅಳಿಯ ನೀನು. ಅತ್ತೆಗೊಂದು ಸೀರೆ ಅಂದೆಯಾ, ಒಂದು ಕುಬಸ ಅಂದೆಯಾ? ಹಬ್ಬಕ್ಕೆ ಕರೆದೊಯ್ದೋಯಾ, ಹುಣ್ಣಿವೆಗೆ ಹೇಳಿಕಳಿಸಿದೆಯಾ? ಹಣ್ಣು ಆಡಾಗ ಕೊಟ್ಟು ಕಳಿಸಿದೆಂಯಾ, ಹಯನು ಆದಾಗ ಹೊರಿಸಿಕಳಿಸಿದೆಯಾ? ಹೆಂಡತಿಯ ಮೈಮೇಲೆ ವಸ್ತು ಅಂದೆಯಾ, ಒಡವೆ ಆಂದೆಯಾ?"

ಬಾಯಿಂದ ಒಂದೊಂದು ವಾಕ್ಯಹೊರಬಿದ್ದಂತೆ, ತಾಬಾಣದ ಪಾಯಸದೊಳಗೆ ಬೆರಳಾಡಿಸಿ, ಕಾಲುವೆಮಾಡಿ ತುಪ್ಪ ಹರಿದುಬರುವಂತೆ ಮಾಡಿಕೊಳ್ಳತೊಡಗಿದಳು.

ಅಳಿಂಹನಿಗೂ ಆಕೆಂಯ ಹೊಲಬು ತಿಳಿಯಿತು. ಅವನೂ ಆಕೆಯ ಮಾತಿಗೆ ಉತ್ತರ ಕೊಡುತ್ತ ತನ್ನತ್ತ ತುಪ್ಪ ಉಳಿದುಕೊಳ್ಳುವಂತೆ ಎತ್ತುಗಡೆ ನಡೆಸಿದನು.

"ಅತ್ತೇ, ನೀನು ಹೀಗೆ ಮಾತಾಡುವದನ್ನು ಕಂಡು ನನ್ನ ಹೊಟ್ಟೆಂಥಲ್ಲಿ ಹೀಗೆ ಕಿವುಚಿದಂತಾಗುತ್ತದೆ, ನೋಡವ್ವ" ಎನ್ನುತ್ತ ಇಡಿಯ ಹುಗ್ಗಿಯಲ್ಲಿ ಆ ತುಪ್ಪವೆಲ್ಲ ಕಲೆಯುವಂತೆ ಕಿವುಚತೊಡಗಿದನು.