ಈ ಪುಟವನ್ನು ಪರಿಶೀಲಿಸಲಾಗಿದೆ

೧೭೪

ಜನಪದ ಕಥೆಗಳು

ಮರುಕ್ಷಣದಲ್ಲಿಯೇ ಒಕ್ಕಲಿಗನು ಕಾರಿಕೊಂಡನು. ಅದರಲ್ಲಿ ಗುಚ್ಚಿ ಕಾಣಿಸಿಕೊಂಡಿತು. ಮತ್ತೆ ಫಡಘಡಿಸುತ್ತ -

“ಗುಂಡ ಗುಂಡ ತೆನಿ ತಿಂದು
ಗು೦ಡದಾಗ ನೀರು ಕುಡಿದು
ಮಂಚದ ಕಾಲಿಗೆ ಜೋಕಾಲಿ ಆಡಿ
ಹಳ್ಳದ ತಿಳಿ ನೀರಿನಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಬಿಸಿಬಿಸಿ ನೀರಿನಿಂದ ಎರಕೊ೦ಡು
ಪಲ್ಲೆ ಮಾಡಿಸಿ ಉಂಡುಗಿಂಡು
ಹೊರಟಿದ್ದೇನೆ ನೋಡು.
ನಾನೇಕೆ ಸಾಯುವೆನು?”

ಎನ್ನುತ್ತ ಬುರ್ರನೆ ಹಾರಿಹೋಯಿತು ಸಾವಿಲ್ಲದ ಗುಬ್ಬಿ.

 •