ಈ ಪುಟವನ್ನು ಪರಿಶೀಲಿಸಲಾಗಿದೆ

ವಿನೋದ ಕಥೆಗಳು

೧೮೭

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ?” ಎಂದು ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು - “ಅಟ್ಟ ಹಾಕುವ ಯುಕ್ತಿಯೇ ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ?” ಎಂದವನೇ ಬಿರಿಬಿರಿ ಹೋಗಿಬಿಟ್ಟನು, ಆ ಹೊಲದ ಮುದುಕ.


 •