ಈ ಪುಟವನ್ನು ಪರಿಶೀಲಿಸಲಾಗಿದೆ

'ಇಲ್ಲಿ ಬಂದು ಕೂತ್ಕೋ ಪಾರ್ವತಿ' ಎಂದೆ. ಪಾರ್ವತಿ ನನ್ನ ಹತ್ತಿರ ಬಂದು ಕುಳಿತಳು. 'ಇವತ್ತು ನಿನಗೇನಾಗಿದೆ' ಎಂದು ಕೇಳುವಂತಿತ್ತು ಪಾರ್ವತಿಯ ಪ್ರಶ್ನಾ ಸೂಚಕವಾದ ದೃಷ್ಟಿ, ನಾನವಳಿಗೆ ಹಿಂದಿನ ರಾತ್ರಿ ರಾಜಮ್ಮನ ಮನೆಯಲ್ಲಿ ನಡೆದುದೆಲ್ಲವನ್ನೂ ಹೇಳಿದೆ. ನನ್ನ ಮಾತುಗಳನ್ನು ಕೇಳಿ ಪಾರ್ವತಿ ಸತ್ತವನು ಯಾರು ? ರಾಜಮ್ಮನಿಗೆ ಏನಾಗಬೇಕು ?' ಎಂದು ಕೇಳಿದಳು. ಅಷ್ಟರವರೆಗೂ ನನಗಾ ವಿಷಯ ಹೊಳೆದಿರಲಿಲ್ಲ. ಸತ್ತವನು ಯಾರು ? ರಾಜಮ್ಮನಿಗೆ ಅಷ್ಟೊಂದು ವ್ಯಸನವನ್ನುಂಟು ಮಾಡು ಅನನಿಗೂ ಅವಳಿಗೂ ಏನು ಸಂಬಂಧ ? ಎಂದು ನನಗೂ ಈಗ ಎನಿಸಿತು. ಪಾರ್ವತಿಗೆ ರಾಜಮ್ಮನ ಮೇಲೆ ಬಹಳ ಸಂದೇಹ: 'ಎಲ್ಲಾ ದರೂ ರಾಜಮ್ಮ ಅವನನ್ನು ವಿಷಹಾಕಿ ಕೊಂದಿರಬಹುದೇ' ಎಂತ, ಒಂದೇ ಒಂದು ದಿನದ ಹಿಂದೆ ಪಾರ್ವತಿಯಂತೆಯೇ ನನಗೂ ಸಂದೇಹ ಉಂಟಾಗುತ್ತಿತ್ತು. ರಾಜಮ್ಮನನ್ನೊಂದು ಸಾರಿ ನೋಡಿದ ಮೇಲೆ ನನ್ನ ಆ ತರದ ಭಾವನೆಗಳೆಲ್ಲಾ ಬದಲಾಗಿಹೋಗಿದ್ದವು. ಅದರಿಂದ ಅವಳ ವಿಷಯದಲ್ಲಿ ಪಾರ್ವತಿಯ ಸಂಶಯದ ಮಾತುಗಳನ್ನು ಕೇಳಿ ನನಗೆ ಕೋಪಬಂತು. 'ಸುಮ್ಮನಿರು ಪಾರ್ವತಿ' ಎಂದುಬಿಟ್ಟೆ. ನನ್ನ ಸ್ವರ ಕಠೋರವಾಗಿದ್ದಿರಬೇಕು ಸಿಟ್ಟಿನಿಂದ, ಪಾರ್ವತಿಯ ಕಣ್ಣುಗಳಲ್ಲಿ ನೀರು ತುಂಬಿತು. ಅವಳ ಮುಖವನ್ನು ನೋಡಿ ನನ್ನ ಕಠೋರತೆಗಾಗಿ ನಾಚಿಕೆ ಯಾಯು, ಅವಳನ್ನು ಸಮಾಧಾನಪಡಿಸುತ್ತ ' ರಾಜಮ್ಮ ವಿಷಹಾಕಿ ಕೊಲ್ಲುವಂಥ ರಾಕ್ಷಸಿಯಂತೆ ತೋರುವುದಿಲ್ಲ ಪಾರ್ವತಿ. ನಮ್ಮ ಶಾಂತಿ ಗಿಂತ ಎಲ್ಲಾದರೂ ಒಂದೆರಡು ವರ್ಷಕ್ಕೆ ದೊಡ್ಡವಳಾಗಿರಬೇಕು. ಪಾಪ, ಅವಳನ್ನು ನೋಡುವಾಗ ಬಹಳ ಮರುವಾಗುತ್ತೆ, ಜನರಿಗೇನು, ಸುಮ್ಮನೆ ಏನಾದರೂ ಹೇಳುತ್ತಿರುತ್ತಾರೆ' ಎಂದು ಹೇಳಿದೆ. ಆದರೆ ಪಾರ್ವತಿಗೆ ರಾಚಮ್ಮನ ಮೇಲಿನ ಸಂದೇಹವು ಸಂಪೂರ್ಣವಾಗಿ ದೂರ ವಾದಂತೆ ತೋರಲಿಲ್ಲ. ಸತ್ತವನು ಹಣಗಾರನಾಗಿರಬಹುದು-ಅವನ ಹಣಕ್ಕಾಗಿ ಅವನನ್ನು ಕೊಂದಿರಬಹುದು-ಈಗ ವ್ಯಸನವನ್ನು ನಟಿಸಿಕ

ಪಾರಾಗಲು ಯತ್ನಿಸುತ್ತಿದ್ದಾಳೆ ಎಂದು ಪಾರ್ವತಿಯು ಊಹನೆ.

೧೩೧