ಈ ಪುಟವನ್ನು ಪರಿಶೀಲಿಸಲಾಗಿದೆ

ಅವನನ್ನು ನಮ್ಮನೆಗೆ ಕರೆದುಕೊಂಡು ಬಂದರು. ಅಂದಿನಿಂದ ಯಾವಾ ಗಲೂ ನಾನು ನಮ್ಮನೆಗೆ ಬರತೊಡಗಿದ ನನಗಾಗಿ, ಸೂಳೆಯರಿಗೆ ಹೃದಯ ವಿರಬಾರದೆಂದು ನನ್ನ ತಾಯಿ ಹೇಳಿಕೊಟ್ಟಿದ್ದರೂ ಮನುವನ್ನು ನಾನು ಪ್ರೀತಿಸತೊಡಗಿದೆ. ಆತನೂ ನನ್ನನ್ನು ಪ್ರೀತಿಸುತ್ತಿದ್ದ. ಮನುವಿನ ಮತ್ತು ನಮ್ಮ ವ್ಯವಹಾರಗಳು ನನ್ನ ತಾಯಿಗೆ ಸರಿಪೀಳುತ್ತಿದ್ದಿಲ್ಲ. ಈ ಮಧ್ಯೆ ಮನುವಿನ ಹಣಕಾಸೆಲ್ಲಾ ನನ್ನ ಪೆಟ್ಟಿಗೆಗೆ ಸೇರಿಹೋಗಿತ್ತು. ಆದ ರಿಂದ ಮುಂದೆ ಅವನಿಂದ ನನ್ನ ತಾಯಿಗೆ ಪ್ರಯೋಜನವಾಗುವಂತಿರಲಿಲ್ಲ.

"ಆಕಸ್ಮಾತ್ತಾಗಿ ನಾನು ನಮ್ಮನೆಗೆ ಬರುವುದು ನಿಂತುಹೋಯ್ತು. ನಾನು ತಾಯಿಯನ್ನು ವಿಚಾರಿಸಿದಾಗ ಅವನು ಮದುವೆಯಾಗಿರುವ ನೆಂದು ಹೇಳಿದಳು, ಮನುವಿನ ಮದುವೆಯ ಮಾತು ಕೇಳಿ ನನಗೆ ಬಹಳ ದುಃಖವಾಯು, ಒಂದೆರಡು ತಿಂಗಳು ಪ್ರಾಣಾಂತಿಕವಾದ ಕಾಯಿಲೆ ಜಲ್ಲಿ ಮಲಗಿಹೋದೆ. ಆಗಲೇ ನಾನು ಏಕೆ ಸಾಯಲಿಲ್ಲವೊ ! ಅಂತೂ ನನಗೆ ಜ್ವರ ಬಿಟ್ಟಾಗ ನಮ್ಮ ಕೆಲಸದವಳ ಮುಲಕ ಮನು ಮದುವೆ ಯಗಲಿಲ್ಲವೆಂದೂ ನಾನು ಸತ್ತುಹೋದೆನೆಂದು ನಮ್ಮ ತಾಯಿಯ ಹುಟ್ಟಿಸಿದ ವರ್ತಮಾನದಿಂದ ಅವನು ಅರೆಹುಚ್ಚನಾಗಿರುವನೆಂದೂ ತಿಳಿಯಿತು. ಅದೇ ದಿನ ರಾತ್ರಿ ನಾನು ಮನೆ ಬಿಟ್ಟು ಹೊರಟುಬಿಟ್ಟೆ. ಮನುವಿನ ಮನೆಗೇ ಹೋದೆ. ಅವನು ಹುಚ್ಚನಾಗಿ ಹೋಗಿದ್ದ. ಹುಚ್ಚಿನಲ್ಲಿ ಕಣ್ಣಿಗೇನೋ ಹಾಕಿಕೊಂಡಿದ್ದರಿಂದ ಎರಡು ಕಣ್ಣುಗಳೂ ದೃಷ್ಟಿಹೀನವಾಗಿದ್ದುವು. ನಮಗೆ ಕೊಟ್ಟು ಉಳಿದಿದ್ದ ಹಣವೂ ಖರ್ಚಾಗಿಹೋಗಿತ್ತು, ಆದರೆ ನನ್ನ ಹತ್ತಿರ ಮನು ಉತ್ತಮುಸ್ಲಿತಿಯಲ್ಲಿದ್ದಾಗ ಕೆಟ್ಟ ಕೆಲವು ನಗಗಳಿದ್ದುವು. ಅವುಗಳನ್ನೆಲ್ಲಾ ಮಾರಿ ಮಗುವಿಗೆ ಚಿಕಿತ್ಸೆ ಮಾಡಿಸಿದೆ. ಚಿಕಿತ್ಸೆಯಿಂದ ಅವನ ಹುಚ್ಚು ಸಂಪೂರ್ಣ ವಾಸಿಯಾಗದಿದ್ದರೂ ಕೆಲವು ವೇಳೆ ಅವನು ಸರಿಯಾಗಿರುತ್ತಿದ್ದ. ಆದರೆ ಅದರಿಂದ ಆಗಾಗ ಜ್ವರ ಬರುತ್ತಿತ್ತು, ಅಂತೂ ಮೊದಲಿನ ವಸುವನ್ನು ನನ್ನ ತಾಯಿ ಕೊಂದುಹಾಕಿಬಿಟ್ಟಿದ್ದಳು. ಮಗುವಿನ ಆ ಸ್ಪಿತಿಯಲ್ಲಿ ನಾನವನೊಡನೆ ಹೆಚ್ಚುಕಾಲ ನಿಲ್ಲಲಾರೆನೆಂದು ನನ್ನ ತಾಯಿ ಯೋಚಿಸಿದ್ದಳು. ಆದರೆ ಅವಳು ಕರೆಯುವಾಗ ನಾನು

ಅವಳೊಡನೆ ಹೋಗದಿದ್ದುದರಿಂದ ಅವಳಿಗೆ ತುಂಬಾ ಸಿಟ್ಟು ಬಂತು.

೧೩೫