ಈ ಪುಟವನ್ನು ಪ್ರಕಟಿಸಲಾಗಿದೆ

ಕಂಬನಿ

ನನ್ನನ್ನು ಮಗಳೆಂದು ತಿಳಿದು ನಮ್ಮ ಮನೆಗೆ ಬರಲು ಹಟಹಿಡಿದರಲ್ಲ ಎಂಬ ಆನಂದದಲ್ಲಿ-' ಎಂದೆಲ್ಲಾ ಬರೆದರು.

ಮ್ಮೆ ನಾನು ಕೊಡಗಿಗೆ ಹೋಗುವುದನ್ನು ನಿರ್ಧರಿಸಿದೆ. ಹಾಗೆ ಗೌರಮ್ಮನವರಿಗೆ ಕಾಗದ ಬರೆದೆ. ಅವರು “ಬೇಗಬನ್ನಿ” ಎಂದು ಬರೆದರು. ನನಗೆ ಬೆಂಗಳೂರು ಮೈಸೂರುಗಳಲ್ಲಿ ಕೆಲಸವಿದ್ದುದರಿಂದ ಹೇಳಿದ ಸಮಯಕ್ಕೆ ಹೋಗಲಾಗಲಿಲ್ಲ. ಅಂತೂ ಒಂದು ದಿನ ಮೈಸೂರಲ್ಲಿ ಕೊಡಗಿನ ಬಸ್ಸು ಹತ್ತಿದೆ. ನಾಲ್ಕು ಗಂಟೆಗೆ ಸುಂಟಿಕೊಪ್ಪಕ್ಕೆ (ಗೌರಮ್ಮನವರ ಊರು ) ತಲುಪುತ್ತದೆಂದು ಹೇಳಿದ್ದರು. ದಾರಿಯಲ್ಲಿ ವನಸಿರಿ ಮೈವೆತ್ತು ನಿಂತಿತ್ತು, ಆದರೂ ನನಗೆ ಅತ್ತ ಲಕ್ಷ್ಯವಿದ್ದಿಲ್ಲ. ನನ್ನ ದೃಷ್ಟಿ ನನ್ನ ಹತ್ತಿರ ಕುಳಿತವರ ಕೈಗಡಿಯಾರದಲ್ಲಿಯ ತಾಸಿನ ಮುಳ್ಳಿನ ಕಡೆಗಿತ್ತು. ನಾಲ್ಕು ಆಗಲೊಲ್ಲದು; ಕೊಡಗಿನ ದಾರಿಯ ಮುಗಿಯಲೊಲ್ಲದು. ನನಗೆ ಬಹಳ ಬೇಸರವೆನಿಸಿತು. 'ಈ ಗಡಿಯಾರ ಮೋಟರಿಯವರದಿರಬೇಕು' ಎಂದೆ. ಅದಕ್ಕೆ ಪ್ರತಿಯಾಗಿ ಮೋಟರಿನ ಕಂಡಕ್ಟರ್ 'ನಮ್ಮ ಬಸ್‌ ನಿಮ್ಮಯ ಬಸ್ಸಿನಂತಲ್ಲ ಸಾರ್' ಎಂದೆ.

ನಾನು ಈ ಮೊದಲು ಗೌರಮ್ಮನವರ ಮನೆ ನೋಡಿದ್ದಿಲ್ಲ; ಆದರೂ ತಲೆ ಏನೇನೋ ಚಿಂತಿಸುತ್ತಿತ್ತು: 'ಒಂದು ಸುಂದರವಾದ ಮನೆ.ಅದರಲ್ಲಿ ಅದರ ಸ್ಥಾಪಿಸಿ-ಗೌರಮ್ಮ-ತನ್ನ ಪತಿಯೊಡನೆ ಕುಳಿತಿದ್ದಾರೆ. ನಡುನಡುವೆ ನಗೆ..'ಬಸ್ಸಿನವನು 'ಹೋಲ್ ಡಾನ್' ಎಂದ; 'ಸುಂಟಿಕೊಪ್ಪ ಸಾರ್' ಎಂದ. ನಾನಿಳಿದೆ. ನಾನು ಬರುವ ದಿವಸ ತಿಳಿಸಿ, ತಪ್ಪಿಸಿ, ಅಂದು ಬರುತ್ತೇನೆಂದು ತಿಳಿಸಿದ್ದಿಲ್ಲವಾದರೂ ಒಬ್ಬನು ಬಂದು 'ಕುಲ ಕರ್ಣಿಯವರೇ?' ಎಂದ. ನಾನು 'ಯಾರು?' ಎಂದೆ. ಗೌರಮ್ಮನವರು ತಮ್ಮನ್ನು ಕರೆದುಕೊಂಡು ಬರಲು ಕಳಿಸಿದ್ದಾರೆ' ಎಂದು ಅವರ ಟಪ್ಪಾಲಿಗೆ ಬರುವ ಹುಡುಗನಾತ. ನಾನು ಆವನೊಡನೆ ಹೊರಟೆ. "ನಿಮಗೆ ತುಂಬ ಕಾಗದ ಬಂದಿದೆ ಸಾರ್, ಅಮ್ಮಾ ಅವರು ನಿಮ್ಮ ದಾರೀ ನೋಡಿ ಬೇಸತ್ತಿದ್ದಾರೆ ಸಾರ್” ಎಂದ. ನನಗೆ ಹಿಗ್ಗು ಉಕ್ಕಿ ಬರುತ್ತಿತ್ತು 'ಎಂಥ ಜನ ಇವರು!' ಎಂದು ಮೆಚ್ಚಿದೆ; ಕೂಡಿ ಹೊರಟೆವು.