ಈ ಪುಟವನ್ನು ಪ್ರಕಟಿಸಲಾಗಿದೆ

ವಾಣಿ ಬರುವುದಕ್ಕೆ ಸಮಯಾಸಮಯಗಳ ಕಟ್ಟುಗಳಿರಲಿಲ್ಲ. ಬೆಳಗ್ಗೆ ಎದ್ದಂದಿನಿಂದ ರಾತ್ರಿ ಮಲಗುವ ತನಕ ಆ ಮನೆಯಿಂದ ಈ ಮನೆಗೆ, ಈ ಮನೆಯಿಂದ ಆ ಮನೆಗೆ ಓಡಾಡುವುದು ಅವಳ ಪದ್ಧತಿ. ಅವಳು ಬಂದು ಹೋಗುವುದರಲ್ಲಿ ವಿಶೇಷವೇನೂ ಇಲ್ಲ. ಆದರೆ ಆ ದಿನದ ವಾಣಿಯ ಬರುವ ಇಂದುವಿನ ಶಾಂತಜೀವನ ಪ್ರವಾಹವನ್ನು ಅಲ್ಲೋಲಕಲ್ಲೋಲ ಮಾಡಲು ಕಾರಣವಾಯ್ತು. ಮಾಣಿ ಬಂದುದು ಹೆಚ್ಚಿನ ಕೆಲಸಕ್ಕೇನೂ ಅಲ್ಲ. ಸಾರಿಗೆ ಬೇಳೆ ಬೇಯಲು ಹಾಕಿ ಅದು ಬೇಯುವತನಕ ಸುಮ್ಮನೆ ಕೂತಿರಬೇಕೇಕೆಂದು ಇಂದುವಿನ ಮನೆಗೆ ಹರಟೆ ಹೊಡೆಯಲು ಬಂದಿದ್ದಳಷ್ಟೆ.

ಮಧ್ಯಾಹ್ನದ ಮೇಲೆ ತುಂಬಾ ಕೆಲಸವಿದ್ದ ರತ್ನ, ಬೇಗನೆ ಊಟ ತಿಳಿಸಿ ಹೋಗಬೇಕೆಂದು ಆ ದಿನ ಬೇಗನೆ ಮನೆಗೆ ಬಂದ. ಮನೆಯಲ್ಲಿ ವಾಣಿ ಇಲ್ಲ- ಒಂದೆರಡು ಬಾರಿ ಕೂಗಿದ. ಪ್ರತ್ಯುತ್ತರವೂ ಇಲ್ಲ. ಕೊನೆಗೆ ಹಿತ್ತಲಲ್ಲಿರಬಹುದೇನೋ ಎಂದು ಬಂದು ನೋಡುವಾಗ ಇಂದುವಿನ ಮನೆಯಿಂದ ವಾಣಿಯ ಮಾತು ಕೇಳಿಸಿತು. ಮಧ್ಯಾಹ್ನದ ವೇಳೆಯಲ್ಲಿ ಮಾಡುವ ಕೆಲಸ ಬಿಟ್ಟು ಸೆರೆಮನೆಗೆ ಹೋಗಿ ಸಮಯ ಕಳೆಯುತ್ತಿರುವಳಲ್ಲ ಎಂದು ಸ್ವಲ್ಪ ಕೋಪವೂ ಬಂತು. 'ವಾಣಿ' ಎಂದು ಸ್ವಲ್ಪ ಗಟ್ಟಿಯಾಗಿಯೇ ಕೂಗಿದ. ಮಾತಿನ ಸಂಭ್ರಮದಲ್ಲಿ ಅವಳಿಗದು ಕೇಳಲಿಲ್ಲ. ಅವಳ ಮಾತಿನ ಗಲಾಟೆಯಲ್ಲಿ ಒಂದುಗೂ ಕೇಳಿಸುವಂತಿರಲಿಲ್ಲ. ಆದುದರಿಂದ ಮಾತಿನಲ್ಲಿ ಮುಳುಗಿದ್ದ ಅವರಿಗೆ ರತ್ನ ಹಿತ್ತಲ ಬೇಲಿಯ ಹತ್ತಿರ ಬಂದು ಪುನಃ ಜೋರಾಗಿ 'ವಾಣೀ' ಎನ್ನುವಾಗ ತುಂಬಗಾಬರಿಯಾಯ್ತು. ವಾಣಿಯಂತೂ 'ಅಯ್ಯೋ ಇಂದೂ, ಇನ್ನೂ ಆಡಿಗೇ ಆಗ್ಲಿಲ್ಲ' ಎಂದು ಅವಸರದಿಂದ ಹೊರಗೆ ಬಂದಳು. ಇಂದು ಅವಳನ್ನು ಹಿಂಬಾಲಿಸಿ ಬಾಗಿಲ ಹತ್ತಿರ ಬರುವಾಗ ಬೇಲಿಯ ಹತ್ತಿರ ನಿಂತಿದ್ದ ದಣಿದ ರತ್ನನನ್ನು ನೋಡಿದಳು. ವಾಣಿ 'ಎಷ್ಟೊತ್ತಾಯ್ತು ಬಂದೂ. ಈಗ್ಲೇ ಆಸ್ಪತ್ರೆಗೆ ಮತ್ತೆ ಹೋಗ್ಬೇಕೇ?' ಎಂದು ಕೇಳುತ್ತಿದ್ದಳು. ಇಂದು ಅವಳ ಮಾತುಗಳನ್ನು ಕೇಳಿ ರತ್ನನಿಗೆ ಪುನಃ ಉಪವಾಸವ್ರತ ಎಂದು ತಿಳಿದುಕೊಂಡಳು.