ಈ ಪುಟವನ್ನು ಪ್ರಕಟಿಸಲಾಗಿದೆ

ರತ್ನನ ಬಾಯಿಂದ ಹೊರಟ ಮಾತ್ರಕ್ಕೆ ತನ್ನ ಹೆಸರಿನಲ್ಲಾದ ಬದಲಾವಣೆಯು ಅವಳ ಮುಖವನ್ನರಳಿಸಿತು. ಕಣ್ಣುಗಳು ಹೃದಯದ ಗುಟ್ಟುಗಳನ್ನೆಲ್ಲಾ ಹೊರಗೆಡವಿ ಅವನ ಮುಖವನ್ನು ನೋಡಿದವು. ರತ್ನನ ಕಣ್ಣುಗಳೂ ಮನದ ಭಾವನೆಗಳನ್ನು ಮುಚ್ಚಿಟ್ಟುಕೊಂಡಿರಲಿಲ್ಲ. ಅವನ ಆ ನೋಟವೇ ಭೂಮಿಯಿಂದ ಮೇಲಕ್ಕೆ-ಬಹು ಮೇಲಕ್ಕೆ ಹೋಗಿದ್ದ ಇಂದುವನ್ನು ಧರೆಗಿಳಿಸಿ ಮರೆತಿದ್ದ ಕರ್ತವ್ಯವನ್ನು ಜಾಗೃತಗೊಳಿಸಿದ್ದು. ಮರುಕ್ಷಣ ಸೇರಿದ್ದ ನೀರನ್ನು ಸಹ ತೆಗೆದುಕೊಳ್ಳದೆ ಒಳಗೆ ಹೋಗಿಬಿಟ್ಟಳು. ರತ್ನ ಬಹಳ ಹೊತ್ತು ಅಲ್ಲೇ ನಿಂತಿದ್ದರೂ ಪುನಃ ಅವಳು ಹೊರಗೆ ಬರಲಿಲ್ಲ.

ಮರುದಿನ, ಮರುದಿನ, ಮರುದಿನವೆಂದು ಮರು ದಿನ ರತ್ನ ಇಂದುವನ್ನು ನಿರೀಕ್ಷಿಸಿದರೂ ಅವಳ ದರ್ಶನವಾಗಲಿಲ್ಲ. ನಾಲ್ಕನೆಯ ದಿನ ಟಪ್ಪಾಲು ಮೂಲಕ ಇಂದುಗೆಂದು ಕಾಗದ ಬಂತು. ರತ್ನನ ಅಕ್ಷರಗಳ ಪರಿಚಯವಿದ್ದ ಅವಳಿಗದು ಅವನದೆಂದು ನೋಡಿದೊಡನೆಯೋ ತಿಳಿಯಿತು. ತಿಳಿದು ಬಹಳ ಹೊತ್ತು ಒಡೆಯದೆ ಅವನ್ನು ಕೈಯ್ಯಲ್ಲಿ ಹಿಡಿದುಕೊಂಡು ಆಲೋಚಿಸುತ್ತ ಕುಳಿತಿದ್ದಳು. ಮತ್ತವಳು ಬಲುಹೊತ್ತಿನ ಮೇಲೆ ಅಲ್ಲಿಂದೇಳುವಾಗಲೂ ಅದು ಒಡೆಯಲ್ಪಟ್ಟಿರಲಿಲ್ಲ; ಆದರೆ ಅವಳ ಕಣ್ಣೀರಿನಿಂದ ಅಭಿಷಿಕ್ತವಾಗಿ ಒದ್ದೆಯಾಗಿಹೋಗಿತ್ತು. ಎದ್ದವಳು ಹಾಗೆಯೇ ಆ ಕಾಗದವನ್ನು ಹಿಡಿದುಕೊಂಡು ಆಡಿಗೆ ಮನೆಗೆ ಹೋದಳು. ಮತ್ತೊಂದು ನಿಮಿಷದಲ್ಲಿ ಒಲೆಯಲ್ಲಿ ಉರಿಯುತ್ತಿದ್ದ ಬೆಂಕಿಯಲ್ಲದು ಬೂದಿಯಾಗಿ ಹೋಯ್ತು-

****

ಮತ್ತೊಂದು ವಾರದ ತರುವಾಯ ವಾಣಿ ತೌರುಮನೆಯಿಂದ ಬಂದಳು. ಬಂದವಳು ನೇರವಾಗಿ ಇಂದುವಿನ ಮನೆಗೆ ಹೋದಳು. ಇಂದುವಿನ ಮನೆಗೆ ಬೀಗ ಹಾಕಿತ್ತು. ನೋಡಿ ವಾಣಿಯ ಆಶ್ಚರ್ಯಕ್ಕೆ

೧೯