ಈ ಪುಟವನ್ನು ಪ್ರಕಟಿಸಲಾಗಿದೆ

೪೬

ಎಲೆ ಬಸವ ಬಸವಣ್ಣ ಬಸವಯ್ಯ ಬಸವರಸ ಬಸವರಾಜ ಬಸವಿದೇವ, ಕೇಳಯ್ಯ, ನಿನ್ನ ನೇಮವಿದಾರ್ಗುಂಟು! ಗುರುಲಿಂಗದೊಳೆರಡಿಲ್ಲದಿಪ್ಪೆ. ಶರಣರ ಸಂಗನೆಂದೆ ಕಾಣ್ಬೆ. ಬಂದ ಭಕ್ತರನತ್ಯಾದರಿಪೆ. ಬಪ್ಪ ಭಕ್ತರಂ ಹರುಷದೊಳಿದಿರ್ಗೊ೦ಬೆ. ಬೇಡಿದುದ ಶರಣರ್ಗಿಲೈನ್ನ ದೀವೆ. ಬೇಡಲೊಲ್ಲ ದವರ್ಗೆ ಮಿಗಿಲಾಗಿ ಆರಾಧಿಪೆ. ಜಾಗ್ರತ್ ಸ್ವಪ್ನ ಸುಷುಪ್ತಿಯವಸ್ಥಾತ್ರಯಂ ಗಳೊಳು ಶರಣರಂ ಸಂಗನೆಂದಲ್ಲದೆ ಕಾಣೆ, ನಿಚ್ಚ ಶಿವರಾತ್ರಿಯನಚ್ಚರಿಯಿಂ ಮಾಳ್ಬೆ, ಜಂಗಮ ಪ್ರಾಣಿಯಾಗಿಪ್ಪೆ, ಶಿವಲಿಂಗಾರ್ಪಿತವಲ್ಲದುದನಾಘ್ರಾಣಿಸೆ, ನೋಡೆ, ನುಡಿಯೆ, ಮುಟ್ಟೆ, ಕೇಳೆ, ಶಿವಸಮಯವನುದ್ಭರಿಸುವೆ. ಲಿಂಗದಲ್ಲಿ ಕಠಿನಮಂ ಕೇಳೆ, ಜಂಗಮದಲ್ಲಿ ಜಾತಿಯನಅಸೆ, ಪ್ರಸಾದದಲ್ಲಿ ಅಪವಿತ್ರತೆಯ ನಟಿಯೆ, ಪರಾಂಗನೆಯರಂ ಹೆತ್ತ ತಾಯ್ಗಳೆಂಬೆ, ಪರದ್ರವ್ಯಮಂ ಕಿಲ್ಪಿಷ ವೆಂದು ಮುಟ್ಟಿ, ನಡೆದು ತಪ್ಪೆ, ನುಡಿದು ಹುಸಿಯೆ, ಹಿಡಿದು ಬಿಡೆ, ಬಿಟ್ಟು ಹಿಂಗಲೀಯೆ, ಕೊಟ್ಟು ನೆನೆಯೆ, ನಟ್ಟು ಕೀಳೆ, ಮುಟ್ಟ ಪೆಂಪಿಂಗೆ, ಕೂಡಿ ತಪ್ಪೆ, ನೋಡಿ ನಿರಾಕರಿಸೆ .ನೆನೆದು ಮನೆಯೆ. ಮನದೊಳೋವರಿಯಿಲ್ಲ, ಬುದ್ದಿಯೊಳು -ವಿಸಂಚವಿಲ್ಲ, ಅಹಂಕಾರದೊಳು ಗರ್ವವಿಲ್ಲ, ಚಿತ್ತದೊಳು ಹೊರೆಯಿಲ್ಲ. ಕಾಮವಿಲ್ಲ, ಕೋಪದ ಮಾತೇಕೆ? ಲೋಭದ ಗಾಳಿ ತೀಡದು, ಮೋಹಕೆ ತೆಅಹಿಲ್ಲ, ಮದದ ಸೊಗಡು ಹೊದ್ದದು, ಮತ್ಸರಕ್ಕಿಂಬಿಲ್ಲ. ಬಸವ ರಾಜ, ನಿನ್ನ ಗುಣಂಗಳಂ ಬಣ್ಣಿಸಲೆನ್ನಳವಲ್ಲ. ಈಶನ ಮಾಸಲಪ್ಪ ಭಕ್ತ, ನಿನಗೆಣೆಯಿಲ್ಲ ಪಡಿಯಿಲ್ಲ, ಪಾಸಟಿಯಾವಂ? ಪಾಷಂಡಿ ಭೂಮಿಯೊಳು ಶಿವ ಭಕ್ತಿಯನಾರಂಭಿಸಿ ಸಾಮರ್ಥ್ಯಮಂ ಬಿತ್ತಿ ಪ್ರತ್ಯಕ್ಷಂಗಳಂ ಬೆಳೆದು ಗಣಪರ್ವ೦ ಗಳಂ ಸುಫಲಂ ಮಾಡಲೆಂದು ಬಂದ ಕಾರಣಿಕ ಬಸವ, ನಿನ್ನ ದೆಸೆಯಿಂದೆಮ್ಮ ಭಕ್ತಿ, ಬಣ್ಣ ವೇಆ ತು-ಎಂದಡಿಗಡಿಗೆ ಮೆಚ್ಚಿ ತೂಗಾಡುವ ಗಣಂಗಳ ಚರಣಂ ಗಳಂ ಬಿಗಿಯಪ್ಪಿ ಬಸವರಾಜಂ ಪೊಗಳೆಗೆ ತಲ್ಲಣಿಸಿ ತಗ್ಗಿ ಮಲ್ಲಣಿಗೊಂಡಾಗ ಳಾಗಳಿನ ಸಂಗತಿಗೆ ಹೊಸ ಹೊಸ ಗೀತಮಂ ಕೇಳಿಸುತ್ತಿರ್ದ(ನ್)....

೯. ಮಹಾದೇವಿಯಕ್ಕ: ಸು. ೧೧೬೦ ಶಿವನೇ ನನ್ನ ಗಂಡ

ವನವೆಲ್ಲ ನೀವೆ. ವನದೊಳಗಣ ದೇವತರುವೆಲ್ಲ ನೀನೆ. ತರುವಿನೊಳ ಗಾಡುವ ಖಗಮೃಗವೆಲ್ಲ ನೀವೆ. ಚೆನ್ನಮಲ್ಲಿಕಾರ್ಜುನ ಸರ್ವಭರಿತನಾಗಿ ಎನಗೆ ಮುಖದೋರ.

ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ, ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ, ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ. ನೆನಹಿಂಗೆ ಅರಿವಾಗಿ ಕಾಡಿತ್ತು ಮಾಯೆ, ಜಗದ ಜಂಗುಳಿಗಳಿಗೆ ಬೆಂಗೋಲನೆತ್ತಿ ಕಾಡಿತ್ತು ಮಾಯೆ. ಚೆನ್ನಮಲ್ಲಿಕಾರ್ಜುನ, ನೀನೊಡ್ಡಿದ ಮಾಯೆಯನಾರೂ ಗೆಲಲಾರರು.

ಪುರುಷನ ಮುಂದೆ ಮಾಯೆ ಸ್ತ್ರೀ ಎಂಬ ಅಭಿಮಾನವಾಗಿ ಕಾಡಿತ್ತು ನೋಡಾ! ಸ್ತ್ರೀಯ ಮುಂದೆ ಮಾಯೆ ಪುರುಷನೆಂಬ ಅಭಿಮಾನವಾಗಿ ಕಾಡಿತ್ತು