ಈ ಪುಟವನ್ನು ಪ್ರಕಟಿಸಲಾಗಿದೆ
೮೮
ಕರ್ನಾಟಕ ಗತವೈಭವ

೬೪೫ ನೆಯ ಇಸವಿಯವರೆಗೆ ಹಿಂದುಸ್ಥಾನದಲ್ಲೆಲ್ಲಾ ಸಂಚರಿಸಿದನು. ಆತನು ಪುಲಿಕೇಶಿಯ ರಾಜ್ಯವನ್ನೂ ಪ್ರಜೆಗಳನ್ನೂ ಕುರಿತು ಬರೆದಿರುವುದೇನೆಂದರೆ
ಈ ಮಹಾರಾಷ್ಟ್ರ ದೊಡ್ಡ ರಾಷ್ಟ) ದ ರಾಜ್ಯದ ಸುತ್ತಳತೆಯು ಸುಮಾರು ೬೦೦೦ ಲಾಯಿ (೧೨೦೦ ಮೈಲು) ಉಂಟು. ರಾಜಧಾನಿಯು ಪಶ್ಚಿಮಭಾಗದಲ್ಲಿ ಒಂದು ದೊಡ್ಡ ಹೊಳೆಯ ಸಮೀಪದಲ್ಲಿ ಇರುತ್ತದೆ. (ಇದು ಬಾದಾಮಿಯೇ ಎಂದು ಡಾ. ಬರ್ಗೆಸ ಇವರು ಅಭಿಪ್ರಾಯಪಟ್ಟಿರುತ್ತಾರೆ. ಮಲಪ್ರಭೆಯೇ ಆ ಹೊಳೆಯು). ಇದರ ಸುತ್ತಳತೆ ಸುಮಾರು ೬೦ ಲಾಯಿ, ಭೂಮಿಯು ಕಸುವುಳ್ಳದ್ದೂ ಫಲವತ್ತಾಗಿಯೂ ಇದ್ದು ಅದರಲ್ಲಿ ಧಾನ್ಯಗಳು ವಿಪುಲವಾಗಿ ಬೆಳೆಯುತ್ತವೆ. ಹವೆಯು ಉಷ್ಣ; ಜನರು ನಿಷ್ಕಪಟಿಗಳೂ ಸಜ್ಜನರೂ ಸತ್ಯವಂತರೂ ಆಗಿರುತ್ತಾರೆ; ಇವರ ನಿಲುವಿಕೆ ಎತ್ತರ; ನಡತೆಯಲ್ಲಿ ಛಲವೂ ಅಭಿಮಾನವೂ ಹೆಚ್ಚು ; ಮಾಡಿದ ಉಪಕಾರವನ್ನೆಮದಿಗೂ ಮರೆಯರು. ಅಪಕಾರ ಮಾಡಿದವರನ್ನು ಮಾತ್ರ ಮೆಟ್ಟದೆ ಬಿಡರು. ಅಪಮಾನವನ್ನು ಪರಿಹರಿಸುವುದಕ್ಕಾಗಿ ತಮ್ಮ ಜೀವವನ್ನೂ ಲೆಕ್ಕಿಸರು. ಸಂಕಟಕಾಲದಲ್ಲಿ ಮರೆ ಹೊಕ್ಕವರನ್ನು ಸಂರಕ್ಷಿಸುವುದಕ್ಕಾಗಿ ಯತ್ನಿಸುವಾಗ ಇವರು ತಮ್ಮನ್ನೂ ಕೂಡ ಮರೆತುಬಿಡುವರು. ಹಗೆ ತೀರಿಸುವುದಿದ್ದಾಗ ಇವರು ಮೊದಲು ಆ ಹಗೆಗೆ ಸೂಚನೆಯನ್ನು ಕೊಡಲಿಕ್ಕೆ ಎಂದೂ ಮರೆಯುವುದಿಲ್ಲ. ಆ ಸೂಚನೆಯನ್ನು ಕೊಟ್ಟ ಬಳಿಕ ಇಬ್ಬರೂ ಜಗಳವಾಡತಕ್ಕವರು ಢಾಲು- ಭಾಲೆಗಳನ್ನು ತೆಗೆದುಕೊಂಡು, ಜಗಳಕ್ಕೆ ಹೊರಡುವರು, ರಣಭೂಮಿ ಯಿಂದ ಓಡಿಹೋಗುವವರನ್ನು ಇವರು ಬೆನ್ನಟ್ಟುವರು. ಆದರೆ ಮರೆಹೊಕ್ಕನರನ್ನು ಕಡಿಯುವುದಿಲ್ಲ. ದಳವಾಯಿಯು ಯುದ್ದದಲ್ಲಿ ಸೋತುಬಂದರೆ, ಅರಸನು ಅವನಿಗೆ ದೇಹದಂಡನೆಯನ್ನು ಮಾಡುವುದಿಲ್ಲ, ಸೀರೆಯನ್ನುಡಿಸಿ ಮೆರೆಸುವನು. ಅದರಿಂದ ಆ ಸೋತ ದಳವಾಯಿಯು ತಾನಾಗಿಯೇ ಪ್ರಾಣಕೊಡುವನು. ಈ ಸಂಸ್ಥಾನದಲ್ಲಿ ಎದೆಗುಂದದ ವೀರಾಳುಗಳು ಸಾವಿರಾರು ಮಂದಿಯುಂಟು. ..... ಇವರು ಮುಂಭಾಗದಲ್ಲಿಯ ರಣಭೇರಿಯ ನಾದವನ್ನನುಸರಿಸಿ ಹೆಜ್ಜೆಯಿಕ್ಕುವರು. ಸಾವಿರಾರು ಮುದ್ದಾನೆಗಳಿಂದಲೂ ಕಾಲಾಳುಗಳಿಂದಲೂ ಕೂಡಿದ ಈ ಸೇನಾಸಮೂಹವನ್ನು ಇದಿರುವ ಎದೆ ಯಾರಿಗುಂಟು? ಇಂಥ ಅನುಪಮವಾದ ಸೇನಾಬಲವೂ ಗಜಬಲವೂ ಉಳ್ಳ ಈ ಅರಸನು ದರ್ಪದಿಂದ ನೆರೆಹೊರೆಯ ರಾಜರನ್ನೆಲ್ಲಾ ಧಿಕ್ಕ