ಈ ಪುಟವನ್ನು ಪ್ರಕಟಿಸಲಾಗಿದೆ



೬೮
ಕರ್ನಾಟಕ ಗತವೈಭವ

೧೦ನೆಯ ಪ್ರಕರಣ


ಕಲಚೂರ್ಯ-ಯಾದವ ಮುಂತಾದವರು
(೧೧೫೬-೧೧೮೩)


ಕಲಚೂರ್ಯರು

ಬಿ

ಜ್ಜಳನು ಮೊದಲು ರಾಷ್ಟ್ರಕೂಟರ ಮಹಾಮಂಡಲೇಶ್ವರನಾಗಿದ್ದಂತೆ ತೋರು ತದೆ. ಈತನು ಚಾಲುಕ್ಯರ ಕೊನೆಯ ಅರಸನಾದ ತೈಲಪನನ್ನು ಓಡಿಸಿ ಸಾರ್ವಭೌಮನಾದ ಸಂಗತಿಯನ್ನು ಹೋದ ಪ್ರಕರಣದಲ್ಲಿ ಹೇಳಿರುವವಷ್ಟೆ ! ಆದರೆ ಬಿಜ್ಜಳನು ಈ ಸಾರ್ವಭೌಮಪದವನ್ನು ಬಹಳ ದಿನಗಳು ಅನುಭವಿಸಲಿಲ್ಲ. ಕಲ್ಯಾಣದಲ್ಲುಂಟಾದ ಧರ್ಮಕ್ರಾಂತಿಯ ಗೊಂದಲದಲ್ಲಿ ಅವನು ತನ್ನ ಜೀವಕ್ಕೆ ಎರವಾಗ ಬೇಕಾಯಿತು. ಆ ಧರ್ಮಕ್ರಾಂತಿಯ ವಿವರವನ್ನು ಕೆಳಗೆ ಕೊಟ್ಟಿದೆ.

ವಿಜಾಪುರ ಜಿಲ್ಲಾ ಬಾಗೇವಾಡಿಯಲ್ಲಿ ಮಂಡಿಗೆಯ ಮಾದಿರಾಜನೆಂಬೊಬ್ಬ ಆರಾಧ್ಯ ಬ್ರಾಹ್ಮಣನಿದ್ದ ನು. ಅವನ ಮಗನೇ ಬಸವನು. ಬಿಜ್ಜಳನ ಮಂತ್ರಿಯಾದ ಬಲದೇವನು ಈ ಬಸವನ ಸೋದರಮಾವನು. ಬಸವನು ಬಲದೇವನ ಮಗಳಾದ ಗಂಗಾಂಬಿಕೆ ಎಂಬವಳನ್ನು ಮದುವೆಯಾಗಿದ್ದನು. ಬಲದೇವನು ಮರಣಹೊಂದಿದ ಬಳಿಕ, ಬಿಜ್ಜಳನು ಬಸವನನ್ನು ತನ್ನ ಮಂತ್ರಿಯನ್ನಾಗಿ ನಿಯಮಿಸಿಕೊಂಡನು. ಬಸವನಿಗೆ ನಾಗಾಂಬಿಕಾ ಎಂಬೊಬ್ಬ ಅಕ್ಕನಿದ್ದಳು. ಇವಳ ಹೊಟ್ಟೆಯಿಂದ ಚನ್ನಬಸವೇಶನು ಹುಟ್ಟಿದನು. ಬಸವನು ಲಿಂಗಾಯತ ಧರ್ಮವನ್ನು ಬೆಳೆಯಿಸಿ, ಬಹು ಜನ ಜೈನರನ್ನು ತನ್ನ ಮತಕ್ಕೆ ಸೇರಿಸಿಕೊಂಡುದರಿಂದ ಬಿಜ್ಜಳನಿಗೂ ಅವನಿಗೂ ಬೇಸರುಂಟಾಯಿತು. ಬಸವನ ಗುರುವಾದ ಅಲ್ಲಮಪ್ರಭು ಶ್ರೀಶೈಲಕ್ಕೆ ಹೋಗಿ ಐಕ್ಯನಾಗಲು, ಬಸವನು ಸಹ ಕಪ್ಪಡಿಯ ಸಂಗಮನಾಥನಲ್ಲಿ ಐಕ್ಯಗೊಂಡನು. ಬಳಿಕ ಬಿಜ್ಜಳನು ಚನ್ನಬಸವೇಶನಿಗೆ ಮಂತ್ರಿಪದವನ್ನು ಕೊಟ್ಟನು. ಲಿಂಗಾಯತ ಮತಸ್ಥರಾದ ಹಳ್ಳಯ್ಯ ಮಧುವಯ್ಯ ಎಂಬಿಬ್ಬರು ಬೇರೆ ಬೇರೆ ಕುಲದವರು ಪರಸ್ಪರ ಬಾಂಧವ್ಯವನ್ನು ಬೆಳಿಸಿದರೆಂಬ ಕಾರಣದಿಂದ ಬಿಜ್ಜಳನು ಅವರನ್ನು ಆನೆಯ ಕಾಲಿಗೆ ಕಟ್ಟಿ ಎಳಿಸಲು, ದೊರೆಯನ್ನು