ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

ಬಾಯಾರಿ ಸೊರಗಿಹಳು
ತಲ್ಲಣಿಸಿ ನಿಂದಿಹಳು
ಬಾಲೆ ಲಲಿತಾಂಗಿ,

ಮರ ಮರದ ಮರೆಯಲ್ಲಿ
ನಿಂತು ನೋಡುತ ಬಾಲೆ
ರಾವುತರ ತಂಡವನು
ರಾಕ್ಷಸರ ತಂಡವನು
ಕುಸಿಯುತ್ತ ಮುಗು
ಕಣ್ಣೀರು ತುಂಬುತ್ತ
'ಹೆಣ್ಣಾಗಿ ಹುಟ್ಟುವುದು
ರೂಪವತಿಯಾಗಿಹುದು
ಏರು ಜವ್ವನವಿಹುದು
ಕೇಡಿಂಗೆ ಕಾರಣವು'
ಎಂದಾಕೆ ಮರುಗುತ್ತ
ಭೀತಿಯಿಂದೋಡಿಹಳು
ದಂಡನಾಧನ ಮಡದಿ
ಬಾಲೆ ಲಲಿತಾಂಗಿ.

“ಎನ್ನ ಪತಿ ಕಣ್ಮುಚ್ಚಿ
ಪರದೇಶಿಯಾದೆನೈ
ಕಾಯುವರು ಆರಿಲ್ಲ
ನಿಷ್ಕರುಣಿಯಾಗದಿರು
ಎಲೆ ವಿಧಿಯೆ, ಬೇಡುವೆನು
ಈಗೆನ್ನ ತೊರೆಯದಿರು

೭೭